ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡುವಲ್ಲಿ ಕೇಂದ್ರದ ಪಾತ್ರವಿಲ್ಲ

ದೆಹಲಿ : ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕ ಸರಕಾರ ನೀಡಿರುವ ತೆರಿಗೆ ನೋಟಿಸ್‌ಗೂ ಕೇಂದ್ರ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕದ ಕಾಂಗ್ರೆಸ್ ಸರಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರಕಾರಕ್ಕೂ ಹಾಗೂ ಜಿಎಸ್‌ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದ. ಜಿಎಸ್‌ಟಿನಲ್ಲಿ ಕೇಂದ್ರ ಸರಕಾರದ ಅಡಿಯಲ್ಲಿ ಸಿಜಿಎಸ್‌ಟಿ (CGST) ಮತ್ತು ರಾಜ್ಯ ಸರಕಾರದಡಿಯಲ್ಲಿ ಎಸ್‌ಜಿಎಸ್‌ಟಿ (SGST) ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜಿಎಸ್‌ಟಿ ಕೌನ್ಸಿಲ್ ನಲ್ಲಿ ಯಾವುದೇ ತೀರ್ಮಾನ‌ ತಗೆದುಕೊಳ್ಳಲು ಮಹತ್ವದ ಪಾತ್ರ ವಹಿಸುವುದು ರಾಜ್ಯ ಸರಕಾರಗಳು. ಕೇಂದ್ರ ಸರಕಾರಕ್ಕೆ ಕೇವಲ 3 ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ‌ಸರಕಾರಗಳ ನಿರ್ಣಯವೇ ಅಂತಿಮವಾಗಿರಲಿದೆ ಎಂದು ಹೇಳಿದರು.

ಇದೀಗ ಹಣ್ಣು, ಹಾಲು, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ಸರಕು ಸೇವಾ ವ್ಯಾಪಾರಿಗಳಿಗೆ ನೋಟಿಸ್ ನೀಡಿ‌, ಅವರಿಗೆ ತೊಂದರೆ ಕೊಡುತ್ತಿದ್ದಾರೆ. ಬೇರೆ ಯಾವುದೇ ರಾಜ್ಯಗಳಲ್ಲಿ ನೀಡದ ನೋಟಿಸ್, ಕರ್ನಾಟಕದಲ್ಲಿನ ಕಾಂಗ್ರೆಸ್ ಸರಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿದೆ. ಯುಪಿಐ ಟ್ರಾನ್ಸಾಕ್ಷನ್ ಇದೀಗ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಡಿಜಿಟಲ್ ಟ್ರಾನ್ಸಾಕ್ಷನ್ ಹದಗೆಡಿಸುವ ದುಸ್ಸಾಹಸಕ್ಕೆ ಕಾಂಗ್ರೆಸ್ ಸರಕಾರ ಕೈಹಾಕಿರುವುದು ನಿಜಕ್ಕೂ ದುರಂತ ಎಂದು ಕಿಡಿಕಾರಿದ್ದಾರೆ.









































































































error: Content is protected !!
Scroll to Top