ಶಿವಪುರ : ಗಾಳಿ ಮಳೆಗೆ ರಸ್ತೆಗುರುಳಿದ ವಿದ್ಯುತ್ ಕಂಬಗಳು

ಹೆಬ್ರಿ : ಬುಧವಾರ ಸಂಜೆ ಸುರಿದ ಗಾಳಿ ಮಳೆಗೆ ಹೆಬ್ರಿ ತಾಲೂಕಿನ‌ ಶಿವಪುರ ಗ್ರಾಮ ಪಂಚಾಯತ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ ಸಮೀಪ ಮರವೊಂದು ವಿದ್ಯುತ್ ತಂತಿಗೆ ಬಿದ್ದ ಪರಿಣಾಮವಾಗಿ ರಸ್ತೆಯುದ್ದಕ್ಕೂ ಸುಮಾರು 7 ವಿದ್ಯುತ್ ಕಂಬಗಳು ರಸ್ತೆಗುರುಳಿದೆ.
ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ರಸ್ತೆಯಲ್ಲಿ ಸಾಗುತ್ತಿದ್ದ ಕೆಲವೊಂದು ವಾಹನ ಸವಾರರು ಕ್ಷಣ ಮಾತ್ರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದ ಕಾರಣ ಸಂಜೆ 6-30 ರಿಂದ ಸುಮಾರು ಒಂದೂವರೆ ಗಂಟೆಗಳ‌ ಕಾಲ‌ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಮೆಸ್ಕಾಂ ಸಿಬ್ಬಂದಿಯೊಂದಿಗೆ ಶ್ರೀನಿವಾಸ್ ಹೆಬ್ಬಾರ್ ಅವರ ತಂಡ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾರ್ಯ ಮಾಡಿದರು.









































error: Content is protected !!
Scroll to Top