ಆ. 3 : ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ವತಿಯಿಂದ ಕಾರ್ಕಳದಲ್ಲಿ ಕೆಸರ್ದ ಕೂಟ

ಕಾರ್ಕಳ : ಯುವವಾಹಿನಿ (ರಿ.) ಕೆಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಕಾರ್ಕಳ ಘಟಕದ ಆತಿಥ್ಯದಲ್ಲಿ ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಆ. 3ರಂದು ಬೆಳಿಗ್ಗೆ 8 ಗಂಟೆಯಿಂದ ಸೂರಾಲು ಕಂಬಳ ಗದ್ದೆಯಲ್ಲಿ ಯವವಾಹಿನಿ ಕೆಸರ್ದ ಕೂಟ – ಯುವವಾಹಿನಿ ಅಂತರ್‌ ಘಟಕ ಸ್ಪರ್ಧೆ ನಡೆಯಲಿದೆ.

ಬೆಳಿಗ್ಗೆ 8 ಗಂಟೆಗೆ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಮಲ್‌ ಕುಮಾರ್‌ ಪಥಸಂಚಲನಕ್ಕೆ ಚಾಲನೆ ನೀಡಲಿದ್ದು, ಆನೆಕೆರೆ ಶ್ರೀ ಕೃಷ್ಣ ಕ್ಷೇತ್ರದ ಆಡಳಿತ ಮೊಕ್ತೇಸರ ಭಾಸ್ಕರ್‌ ಎಸ್.‌ ಕೋಟ್ಯಾನ್‌ ಧ್ವಜಾರೋಹಣ ನೆರವೇರಿಸಲಿದ್ದಾರೆ.
9 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ವಿ. ಸುನಿಲ್‌ ಕುಮಾರ್‌ ಕೆಸರ್ದ ಕೂಟ ಉದ್ಘಾಟಿಸಲಿದ್ದಾರೆ. ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷೆ ಮಮತಾ ಅಂಚನ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೊಕೇಶ್‌ ಕೋಟ್ಯಾನ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜನಪ್ರತಿನಿಧಿಗಳು, ಉದ್ಯಮಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.









































































































error: Content is protected !!
Scroll to Top