ಧರ್ಮಸ್ಥಳ ಪ್ರಕರಣ – ಎಸ್‌ಐಟಿಯಿಂದ ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಶಿಫಾರಸು

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಗಾಗಿ ರಚನೆಯಾಗಿರುವ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಓರ್ವ ಐಪಿಎಸ್‌ ಅಧಿಕಾರಿಯನ್ನು ಕೈಬಿಡುವಂತೆ ಸರಕಾರಕ್ಕೆ ಶಿಫಾರಸು ಮಾಡಲಾಗಿದೆ.

ವೈಯಕ್ತಿಕ ಕಾರಣ ನೀಡಿ ತನಿಖಾ ತಂಡದಿಂದ ಕೈಬಿಡುವಂತೆ ಸಿಎಆರ್‌ ಕೇಂದ್ರಸ್ಥಾನದ ಉಪ ಪೊಲೀಸ್‌ ಆಯುಕ್ತರಾದ ಸೌಮ್ಯಲತಾ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ಎಸ್‌ಐಟಿ ಮುಖ್ಯಸ್ಥ ಡಾ. ಪ್ರಣವ್‌ ಮೊಹಂತಿ ತಂಡದಿಂದ ಅವರ ಹೆಸರನ್ನು ಕೈಬಿಡಲು ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಸೌಮ್ಯಲತಾ ಬೆನ್ನಲ್ಲೇ ಮತ್ತೊಬ್ಬ ಅಧಿಕಾರಿಯೂ ತನಿಖಾ ತಂಡದಿಂದ ಹಿಂದೆ ಸರಿಯುವ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಅದೇ ಧರ್ಮಸ್ಥಳದಲ್ಲಿ ವಿದ್ಯಾರ್ಥಿ ಆಗಿದ್ದ ಕಾರಣ ಹಿಂದೆ ಸರಿಯುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ಆಂತರಿಕ ವಿಭಾಗದ ಪೊಲೀಸ್‌ ಮಹಾ ನಿರ್ದೇಶಕ ಡಾ. ಪ್ರಣವ್‌ ಮೊಹಂತಿ ನೇತೃತ್ವದಲ್ಲಿ ರಾಜ್ಯ ಸರಕಾರ ರಚಿಸಿರುವ ಎಸ್‌ಐಟಿ ತಂಡದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್‌ ಮಹಾ ನಿರೀಕ್ಷಕ ಎಂ.ಎನ್‌ ಅನುಚೇತ್‌, ಸಿಎಆರ್‌ ಕೇಂದ್ರಸ್ಥಾನದ ಉಪ ಪೊಲೀಸ್‌ ಆಯುಕ್ತರಾದ ಸೌಮ್ಯಲತಾ ಹಾಗೂ ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಅಧೀಕ್ಷಕ ಜಿತೇಂದ್ರ ಕುಮಾರ್‌ ದಯಾಮ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿತ್ತು.









































































































error: Content is protected !!
Scroll to Top