ಉಡುಪಿ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅ. 1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 6 ವೈಯಕ್ತಿಕ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಪ್ರಶಸ್ತಿಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನೀಡಲಾಗುವುದು.
ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ/ ಸಲ್ಲಿಸುತ್ತಿರುವ ಜಿಲ್ಲೆಯ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ಪ್ರಸ್ತಾವನೆಗಳನ್ನು ನಮೂನೆ 1 ಮತ್ತು ನಮೂನೆ 2 ರಲ್ಲಿ ಭರ್ತಿ ಮಾಡಿ, ಹಾರ್ಡ್ ಕಾಪಿ ಹಾಗೂ ಸಾಫ್ಟ್ ಕಾಪಿಯನ್ನು ಆಗಸ್ಟ್ 25 ರೊಳಗಾಗಿ ಜಿಲ್ಲಾ ಕಚೇರಿಗೆ ಸಲ್ಲಿಸಬಹುದಾಗಿದೆ. ಪ್ರಸ್ತಾವನೆಗಳನ್ನು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ದ್ವಿಪ್ರತಿಯಲ್ಲಿಯೇ ಸಲ್ಲಿಸಬೇಕು. ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ‍್ಯಕ್ರಮದಲ್ಲಿ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಚೇರಿ ರಜತಾದ್ರಿ, ಮಣಿಪಾಲ. ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂರ್ಪಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.





















