ಧರ್ಮಸ್ಥಳ ಪ್ರಕರಣ : ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿರುವ ಎಸ್‌ಐಟಿ

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ರಚಿಸಿರುವ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಎಸ್‌ಐಟಿ ತಂಡ ಇಂದು ಧರ್ಮಸ್ಥಳಕ್ಕೆ ತೆರಳುವ ನಿರೀಕ್ಷೆಯಿದೆ. ತಂಡವು ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಕ್ವಾಟ್ರಸ್‌ನಲ್ಲಿ ಎಸ್‌ಐಟಿ ಕಚೇರಿ ಆರಂಭಿಸಲಿದೆ. ಅಲ್ಲದೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಂಗಳೂರಿನ ಎಸ್‌ಪಿ ಕಚೇರಿ ಆವರಣದಲ್ಲಿ ಎಸ್‌ಐಟಿ ಕಚೇರಿ ಸಿದ್ಧವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.































error: Content is protected !!
Scroll to Top