ಪಿಕಪ್ ನದಿಗೆ ಬಿದ್ದು ಮಗ ಸಾವು

ಚಿಕ್ಕಮಗಳೂರು : ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ಪಿಕಪ್‌ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪರಿಣಾಮವಾಗಿ ಚಾಲಕ ಗಣಪತಿಕಟ್ಟೆ ನಿವಾಸಿ ಶಮಂತ್ (23) ಮೃತ ಪಟ್ಟಿದ್ದ. ಮಗನ ಸಾವಿನಿಂದ ಮನನೊಂದಿದ್ದ ತಾಯಿ ರವಿಕಲಾ (48) ಮಗನ ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದು ಶಮಂತ್ ಸಾವನ್ನಪ್ಪಿದ್ದ. ಶಮಂತ್ ಪಿಕಪ್‌ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಈ ಅವಘಡ ಸಂಭವಿಸಿತ್ತು.
ನಿರಂತರ ಮಳೆ ಸುರಿಯುತ್ತಿದ್ದರಿಂದ ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

































error: Content is protected !!
Scroll to Top