ಧರ್ಮಸ್ಥಳ ಪ್ರಕರಣ – ದೂರುದಾರ ಎಸ್‌ಐಟಿ ಮುಂದೆ ಹಾಜರು

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ನೇಮಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ತನಿಖೆ ಆರಂಭಿಸಿದೆ. ಮಂಗಳೂರಿನ ಮಲ್ಲಿಕಟ್ಟೆಯ ಐಬಿಯಲ್ಲಿ ಎಸ್ಐಟಿಗಾಗಿ ಎರಡು ಕೊಠಡಿ ಮೀಸಲಿಡಲಾಗಿದೆ.

ಶವಗಳನ್ನು ಹೂತಿಟ್ಟ ಬಗ್ಗೆ ದೂರು ನೀಡಿರುವ ವ್ಯಕ್ತಿ ಶನಿವಾರ ವಕೀಲರ ಜೊತೆಗೆ ಮಲ್ಲಿಕಟ್ಟೆಯ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ. ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಜು. 25ರಂದು ರಾತ್ರಿ ಮಂಗಳೂರಿಗೆ ಆಗಮಿಸಿದ್ದರು. ತಂಡದ ಅಧಿಕಾರಿ ಜಿತೇಂದ್ರ ದಯಾಮ ಅವರು ರಾತ್ರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಕರಣದ ದಾಖಲೆಗಳನ್ನು ಪಡೆದಿದ್ದಾರೆ.



































































































error: Content is protected !!
Scroll to Top