ಅರ್ಥಶಾಸ್ತ್ರ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ

ಕಾರ್ಕಳ : ಮನೆ ಬಜೆಟ್‌ನಿಂದ ಹಿಡಿದು ರಾಷ್ಟ್ರದ ಬಜೆಟ್ ತನಕ ಎಲ್ಲವು ಅರ್ಥಶಾಸ್ತ್ರದ ತತ್ವಗಳು ಕಾರ್ಯನಿರ್ವಹಿಸುತ್ತವೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಶ್ಲೇಷಣಾ ಕೌಶಲ್ಯ, ಆರ್ಥಿಕ ತರ್ಕ ಮತ್ತು ನಿರ್ಣಾಯಕತೆ ಅಗತ್ಯ ಎಂದು ಉದ್ಯಮಿ ಸೂರಜ್‌ ಶೆಟ್ಟಿ ತಿಳಿಸಿದರು. ಅವರು ಜು. 28ರಂದು ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ ಪರವಾಗಿ ಕಾರ್ಕಳದ ಉದ್ಯಮಿ ಸೂರಜ್ ಶೆಟ್ಟಿ ಈ ಕಾರ್ಯಕ್ರಮದಲ್ಲಿ ಭಅಗವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ಜಿಲ್ಲೆಯ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಮಾತನಾಡಿ, ಅರ್ಥಶಾಸ್ತ್ರ ಮತ್ತು ಆರ್ಥಿಕತೆ ಎಂದರೆ ಕೇವಲ ಹಣದ ಚಲಾವಣೆ ಅಲ್ಲ, ಅದು ನಮ್ಮ ಆಯ್ಕೆಗಳು, ಆದ್ಯತೆಗಳು ಮತ್ತು ಜೀವನ ಪಾಠಗಳ ಚಿಹ್ನೆಯಾಗಿದೆ. ಜಾಗತಿಕ ಆರ್ಥಿಕತೆಯ ಪ್ರವಾಹದಲ್ಲಿ ಹೇಗೆ ಸಮತೋಲನ ವಹಿಸಬೇಕು ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ವಹಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರೂ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು ಅರ್ಥಶಾಸ್ತ್ರದ ಮಹತ್ವ, ಅದರ ಪ್ರಾಯೋಗಿಕ ಬಳಕೆ ಹಾಗೂ ಅರ್ಥಶಾಸ್ತ್ರವನ್ನು ವೃತ್ತಿಯಾಗಿ ಹೇಗೆ ಆಚರಿಸಬಹುದು ಎಂಬುದರ ಕುರಿತು ತಿಳಿಸಿದರು.

ಕಾರ್ಯಗಾರದಲ್ಲಿ 2025ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಮತ್ತು ಅರ್ಥಶಾಸ್ತ್ರ ವಿಷಯದಲ್ಲಿ ಶೇ. 100 ಫಲಿತಾಂಶ ಸಾಧಿಸಿದ ಕಾಲೇಜುಗಳ ಉಪನ್ಯಾಸಕರನ್ನು ಪುರಸ್ಕರಿಸಿ ಗೌರವಿಸಲಾಯಿತು. ಅರ್ಥಶಾಸ್ತ್ರ ವಿಷಯದಿಂದ ಪ್ರಾಂಶುಪಾಲರಾಗಿ ಮುಂಬಡ್ತಿ ಹೊಂದಿದ ಬೆಳ್ಮಣ್ಣು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ವಿನ್ಸೆಂಟ್ ವಿನೋದ್ ಡಿಸೋಜಾ ಇವರನ್ನು ಅಭಿನಂದಿಸಲಾಯಿತು. ವಯೋನಿವೃತ್ತಿ ಹೊಂದುತ್ತಿರುವ ಹೊಸಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಗೋಪಾಲ್ ಭಟ್ ಮತ್ತು ಗೋಳಿಯಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ನಾಗರಾಜ್ ವೈದ್ಯ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಗಾರದಲ್ಲಿ ಎರಡನೇ ವರ್ಷದ ಅರ್ಥಶಾಸ್ತ್ರದಲ್ಲಿ ಗಣಿತದ ಸಮಸ್ಯೆಗಳಿಗೆ ಪರಿಹಾರ ಎಂಬ ವಿಚಾರದ ಕುರಿತು ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ದಿನಕರ ಶೆಟ್ಟಿ ಇವರು ವಿಚಾರ ಮಂಡಿಸಿದರು. ಹೊಸ ಪ್ರಶ್ನೆ ಬ್ಯಾಂಕ್ ಮತ್ತು ಪ್ರಶ್ನೆ ಪತ್ರಿಕೆ ತಯಾರಿಕೆಗೆ ಸಂಬಂಧಿಸಿದ ಮಾಹಿತಿಗಳು ಎಂಬ ವಿಚಾರದ ಕುರಿತು ಹಾಸನದ ಸರ್ಕಾರಿ ಸ್ವತಂತ್ರ ಪಿ.ಯು. ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಧರ್ಮೇಂದ್ರ ಬಿ.ಜಿ., ವಿಚಾರ ಮಂಡಿಸಿದರು. ಬಳಿಕ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಗಾರದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಮಂಡಳಿ, ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳ ಅರ್ಥಶಾಸ್ತ್ರ ಉಪನ್ಯಾಸಕರು, ಕ್ರಿಯೇಟಿವ್ ಕಾಲೇಜಿನ ಬೋಧಕ- ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷೆ ಅನುರಾಧ ಎಚ್. ಸ್ವಾಗತಿಸಿ, ಉಪನ್ಯಾಸಕಿ ಜ್ಯೋತಿ ಕೊಲ್ಲೂರು ವಂದಿಸಿದರು. ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು.









































































































error: Content is protected !!
Scroll to Top