ಪರಿಶಿಷ್ಟ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿರುವುದು ಸರಿಯಲ್ಲ

ಕಾರ್ಕಳ : ಎಸ್‌ಸಿಎಸ್‌ಪಿ/ ಟಿಎಸ್‌ಪಿ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣದ ಯೋಜನೆಗಳು)ಯ 2025 -26ನೇ ಸಾಲಿನ ಅನುದಾನವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ತಿಳಿಸಿದ್ದಾರೆ.

ಪರಿಶಿಷ್ಟ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಸಮುದಾಯಕ್ಕೆ ಮಾಡುತ್ತಿರುವ ದ್ರೋಹ. ಆದ್ದರಿಂದ 2013ರ SCSP – TSP ಕಾಯ್ದೆಯ 7(D) ರದ್ದಾದಂತೆ 7(C)ಯೂ ರದ್ದುಗೊಳಿಸಿ, ಆ ಮೂಲಕ ಪರಿಶಿಷ್ಟರ ಪೂರ್ಣ ಪಾಲು ಪರಿಶಿಷ್ಟರಿಗೆ ಗ್ಯಾರಂಟಿಯಾಗಲಿ ಎಂದು ಗಂಗಾಧರ ಗೌಡ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.























































































































error: Content is protected !!
Scroll to Top