ಕಾರ್ಕಳ : ಕಂಟೈನರ್ ಮತ್ತು ಸ್ಕೂಟಿ ನಡುವೆ ಡಿಕ್ಕಿಯಾಗಿ ಸವಾರ ಗಾಯಗೊಂಡಿರುವ ಘಟನೆ ಜು. 30 ರಂದು ಜೋಡುರಸ್ತೆ ಸರ್ಕಲ್‌ನಲ್ಲಿ ನಡೆದಿದೆ. ಕಾರ್ಕಳದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಂಟೈನರ್ ಮತ್ತು ಜೋಡುರಸ್ತೆ ಸರ್ಕಲ್‌ನಲ್ಲಿ ಸಾಗುತ್ತಿದ್ದ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು ಪರಿಣಾಮವಾಗಿ ಸ್ಕೂಟಿ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯರು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಸ್ಕೂಟಿ ಸವಾರನನ್ನು ಚಿಕ್ಕಲ್‌ಬೆಟ್ಟು ನಿವಾಸಿ ಸಾಧು ಶೆಟ್ಟಿ ಎಂದು ಗುರುತಿಸಲಾಗಿದೆ. ಅವರು ಹೆಲ್ಮೆಟ್ ಧರಿಸಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ.
ಕಂಟೈನರ್ – ಸ್ಕೂಟಿ ಡಿಕ್ಕಿ : ಸವಾರನಿಗೆ ಗಾಯ



























































