ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಆಯೋಜಿಸಿದ್ದ 17 ವಯೋಮಿತಿಯೊಳಗಿನ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 9ನೇ ತರಗತಿಯ ಅವನಿ ಪೈ, ಧ್ರುವಿತಾ ಜಿ. ಡಿ. ಹಾಗೂ 10ನೇ ತರಗತಿಯ ಸೋನಲ್ ಲೋಬೋ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದವರು.
ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.
ಶಟಲ್ ಬ್ಯಾಡ್ಮಿಂಟನ್ : ಜ್ಞಾನಸುಧಾ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ



























































