ಪರಶುರಾಮ ಮೂರ್ತಿಯ ಪುನರ್ ನಿರ್ಮಾಣಕ್ಕಾಗಿ ಉದಯ ಶೆಟ್ಟಿ ಮುನಿಯಾಲು ಅವರಿಂದ ಹೈಕೋರ್ಟ್‌ಗೆ ರಿಟ್ ಅರ್ಜಿ

ಕಾರ್ಕಳ : ಬೈಲೂರಿನ ಉಮ್ಮಿಕ್ಕಳ ಬೆಟ್ಟದಲ್ಲಿನ ಪರಶುರಾಮ ಥೀಮ್‌ ಪಾರ್ಕ್‌ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡ ಉದಯ್‌ ಶೆಟ್ಟಿ ಮುನಿಯಾಲು ಅವರು ಜು. 25ರಂದು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿಯ ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ತಾವು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ರಿಟ್‌ ಅರ್ಜಿಯಲ್ಲಿ ವಿವಾದಿತ ಪರಶುರಾಮ ಮೂರ್ತಿಯನ್ನು ಪುನರ್‌ ರಚಿಸಿ, ಪುನರ್‌ ಸ್ಥಾಪಿಸುವಂತೆ ಪ್ರತಿವಾದಿಗಳಾದ ಕರ್ನಾಟಕ ರಾಜ್ಯ ಸರಕಾರದ ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲಾಧಿಕಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕರು ಹಾಗೂ ಮಲ್ನಾಡ್‌ ಪ್ರದೇಶ ಅಭಿವೃದ್ಧಿ ಮಂಡಳಿಯ ನಿರ್ದೇಶಕರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದಾರೆ. ಅಲ್ಲದೆ, ರಿಟ್‌ ಅರ್ಜಿ ವಿಚಾರಣೆಯಾಗುವವರೆಗೆ ವಿವಾದಿತ ಪರಶುರಾಮನ ಮೂರ್ತಿಯ ಬಿಡಿಭಾಗಗಳನ್ನು ಸಂರಕ್ಷಿಸುವಂತೆ ಪ್ರತಿವಾದಿಗಳಿಗೆ ಸೂಕ್ತ ಆದೇಶ ನೀಡುವಂತೆ ಅರ್ಜಿಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆಯಷ್ಟೇ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ದೋಷರೋಪ ಪಟ್ಟಿಯಲ್ಲಿ ಮೂರ್ತಿಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ವರದಿಯಾಗಿತ್ತು. ಇದೀಗ ಮೂರ್ತಿಯನ್ನು ಪುನರ್‌ ನಿರ್ಮಾಣ ಮಾಡಬೇಕೆಂದು ಉದಯ್ ಶೆಟ್ಟಿ ಮುನಿಯಾಲು ಅವರು ರಿಟ್‌ ಅರ್ಜಿ ಸಲ್ಲಿಸಿರುವುದು ಸಾರ್ವಜನಿಕ ವಲಯದಲ್ಲಿ ಗೊಂದಲ ಮೂಡಿಸಿದೆ.























































































































error: Content is protected !!
Scroll to Top