ಮಂಗಳೂರಿನಲ್ಲಿ ಸಹಾಯವಾಣಿ ತೆರೆದ ಎಸ್ಐಟಿ

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಗಾಗಿ ಎಸ್‌ಐಟಿ ಅಧಿಕಾರಿಗಳು ಸಹಾಯವಾಣಿ ತೆರೆದಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯ ಐ.ಬಿ.ಯಲ್ಲಿರುವ ಎಸ್ಐಟಿಯನ್ನು ಸಂಪರ್ಕಿಸಲು ಅಥವಾ ಪ್ರಕರಣದ ಬಗ್ಗೆ ಮಾಹಿತಿ ನೀಡಲಯ ಸಹಾಯವಾಣಿ ತೆರೆಯಲಾಗಿದ್ದು, 0824-2005301 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳಿಸಿರುವ ಎಸ್‌ಐಟಿ ತಂಡ ದೂರುದಾರ ಗುರುತಿಸಿದ 13 ಸ್ಥಳಗಳಲ್ಲಿ ಒಂದೊಂದೆ ಜಾಗಗಳನ್ನು ಅಗೆದು ಶೋಧ ನಡೆಸುತ್ತಿದ್ದಾರೆ. ಸದ್ಯ, ದೂರುದಾರ ಸೂಚಿಸಿದ 5 ಸ್ಪಾಟ್‌ಗಳಲ್ಲಿ ಈಗಾಗಲೇ ಕಳೇಬರ ಹುಡುಕಾಟ ಮುಕ್ತಾಯವಾಗಿದೆ. ಆದರೆ, ಇಲ್ಲಿ ಯಾವುದೇ ಕಳೇಬರ ಪತ್ತೆಯಾಗಿಲ್ಲ.





























































































































error: Content is protected !!
Scroll to Top