ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ಕಾರ್ಕಳ ವಲಯ ಇದರ ವತಿಯಿಂದ ಶ್ರೀ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 14 ವಯೋಮಿತಿಯೊಳಗಿನ ಪ್ರೌಢಶಾಲಾ ವಿದ್ಯಾರ್ಥಿಗಳ ಕಾರ್ಕಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಕ್ಷಮ್, ಶ್ರೇಯಾಂಕ್ ಎಸ್. ಆಚಾರ್ಯ ಹಾಗೂ ವಿನೀತ್ ಇವರು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎ. ಯೋಗೀಶ್ ಹೆಗ್ಡೆ, ಸಂಚಾಲಕ ನರೇಂದ್ರ ಕಾಮತ್ ಕೆ. ಹಾಗೂ ಮುಖ್ಯ ಶಿಕ್ಷ ಆರ್. ನಾರಾಯಣ ಶೆಣೈ ಅಭಿನಂದಿಸಿದ್ದಾರೆ.
ಶಟಲ್ ಬ್ಯಾಡ್ಮಿಂಟನ್ – ಭುವನೇಂದ್ರ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ







































