ಬೆಂಗಳೂರು : ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಪ್ರಕರಣವನ್ನು ಬೆನ್ನತ್ತಿದ ವಿಶೇಷ ತನಿಖಾ ತಂಡಕ್ಕೆ ನೇತ್ರಾವತಿ ತಟದ 6ನೇ ಪಾಯಿಂಟ್ನಲ್ಲಿ ಸಿಕ್ಕಿದ ಅಸ್ಥಿಪಂಜರದ ಮೂಳೆಗಳನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ರವಾನಿಸಿದೆ.
ಅಸ್ಥಿಪಂಜರದ ವಯಸ್ಸು ಮತ್ತು ಸ್ಥಿತಿ ಸೇರಿದಂತೆ ಹಲವಾರು ಅಂಶಗಳನ್ನು ಅವಲಂಬಿಸಿ ಎಫ್ಎಸ್ಎಲ್ ಪರೀಕ್ಷೆ ನಡೆಸಲಾಗುತ್ತದೆ. ಅಸ್ಥಿಪಂಜರ ಒಟ್ಟಾಗಿ ಸಿಕ್ಕರೆ ಸಾವಿನ ಸಂಭವನೀಯ ಕಾರಣ ತಿಳಿಯಬಹುದು. ಮೃತನ ಲಿಂಗ, ಅಂದಾಜು ವಯಸ್ಸು, ಎತ್ತರ ಪತ್ತೆ ಮಾಡಬಹುದು. 22 ವರ್ಷಕ್ಕಿಂತ ಕಡಿಮೆ ವಯಸ್ಸಾಗಿದ್ದರೆ ಮೌಲ್ಯಮಾಪನ ನಿಖರವಾಗಿರಬಹುದು. ಮೂಳೆಗಳಿಂದ ದೇಹದ ಮೇಲೆ ಗಾಯವಾಗಿದ್ದರೆ ಪತ್ತೆ ಮಾಡಲು ಸಾಧ್ಯವಿದೆ ಎಂದು ವರದಿಯಾಗಿದೆ.
ದವಡೆ ಹಲ್ಲು, ಉದ್ದನೆಯ ಮೂಳೆಯಿಂದ ಮೃತನ ಗುರುತು ಪತ್ತೆ ಮಾಡಬಹುದು. ಮೂಳೆಯ ಡಿಎನ್ಎ ಮಾದರಿ ಜೊತೆ ಮೃತನ ಕುಟುಂಬದೊಂದಿಗೆ ಹೋಲಿಕೆ ಮಾಡಬಹುದು.










































