ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ʻಆಪರೇಷನ್ ಅಖಾಲ್ʼ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ʻಆಪರೇಷನ್ ಅಖಾಲ್ʼ ಹೆಸರಿನಲ್ಲಿ ಕಾರ್ಯಾಚರಣೆ ಶುರು ಮಾಡಿತು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ ಭದ್ರತಾ ಪಡೆಗಳು ಓರ್ವ ಉಗ್ರನನ್ನ ಹತ್ಯೆಗೈದಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.
ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಲಿಡ್ವಾಸ್ ಪ್ರದೇಶದ ದಚಿಗಮ್ ಅರಣ್ಯ ಪ್ರದೇಶದಲ್ಲಿ ʻಆಪರೇಷನ್ ಮಹಾದೇವ್ʼ ಕಾರ್ಯಾಚರಣೆ ನಡೆಸಿದ್ದ ಚಿನಾರ್ ಕಾರ್ಪ್ಸ್ ಮೂವರು ವಿದೇಶಿ ಉಗ್ರರನ್ನ ಬೇಟೆಯಾಡಿತ್ತು. ಈ ಪೈಕಿಯಲ್ಲಿ ಹೊಬ್ಬ ಪಹಲ್ಗಾಮ್ ನರಮೇಧಕ್ಕೆ ಕಾರಣವಾದ ಉಗ್ರನಾಗಿದ್ದ. ಈ ಬೆನ್ನಲ್ಲೇ ಮತ್ತು ಕಾರ್ಯಾಚರಣೆ ಕೈಗೊಂಡಿದೆ.




























































