ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ​: 14 ಕಡೆ ಎನ್​ಐಎ ದಾಳಿ

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ದಾಳಿ ನಡೆಸಿದೆ. ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್​ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಎನ್​ಐಎ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.

ಮೇ 1ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧಿಸಿದಂತೆ 12‌ ಜನರನ್ನು ಬಜಪೆ ಪೊಲೀಸರು ಬಂಧಿಸಿದ್ದರು. ಬಳಿಕ ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನ ಎನ್​ಐಎ ಹೆಗಲಿಗೆ ನೀಡಿತ್ತು. ಸುಹಾಸ್ ಶೆಟ್ಟಿ ಹೆತ್ತವರು ಕೂಡ ಎನ್​ಐಎ ತನಿಖೆ ಮೂಲಕ ಮಾತ್ರ ತಮ್ಮ ಮಗನ‌ ಸಾವಿಗೆ ನ್ಯಾಯ ಸಿಗುತ್ತೇ ಎಂದು ಒತ್ತಾಯಿಸಿದ್ದರು. ಈ‌ ಮಧ್ಯೆ ಅವರು ರಾಜ್ಯಪಾಲರ ಮೂಲಕ ಪ್ರಕರಣವನ್ನು ಎನ್​ಐಎಗೆ ನೀಡುವಂತೆ ಮನವಿ ಮಾಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೂ‌ ಈ ಹತ್ಯೆಯ ಹಿಂದಿರುವ ಶಕ್ತಿಗಳ ಬಗ್ಗೆ ಗಮನಕ್ಕೆ ತಂದಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆಯೇ ಸುಹಾಸ್ ಹತ್ಯೆ ಪ್ರಕರಣವನ್ನು ಎನ್​​ಐಎಗೆ ವಹಿಸಿತ್ತು.























































































































error: Content is protected !!
Scroll to Top