ಗುಂಡಿಗೆ ಬಿದ್ದ ಸ್ಕೂಟರ್‌ – ಸಹಸವಾರೆ ಆಸ್ಪತ್ರೆ ದಾಖಲು

ಕಾರ್ಕಳ : ಸ್ಕೂಟರ್‌ ಗುಂಡಿಗೆ ಬಿದ್ದ ಪರಿಣಾಮವಾಗಿ ಸಹಸವಾರೆ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ಆ. 3ರಂದು ನೀರೆ ಗ್ರಾಮದಲ್ಲಿ ಸಂಭವಿಸಿದೆ.
ಉಷಾ ಅವರನ್ನು ಅವರ ಪತಿ ಸ್ಕೂಟರಿನಲ್ಲಿ ಕುಳ್ಳಿರಿಸಿಕೊಂಡು ಉಡುಪಿ ಅಂಬಲಪಾಡಿ ದೇವಸ್ಥಾನಕ್ಕೆ ಹೋಗಿ ವಾಪಾಸು ಮನೆಯ ಕಡೆಗೆ ಬರುತ್ತಿರುವಾಗ ರಾತ್ರಿ 7:30ಕ್ಕೆ ನೀರೆ ಗ್ರಾಮದ ನೀರೆಜೆಡ್ಡು ಎಂಬಲ್ಲಿ ಸ್ಕೂಟರ್‌ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದೆ. ಪರಿಣಾಮವಾಗಿ ಹಿಂಬದಿ ಕುಳಿತ್ತಿದ್ದ ಉಷಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ನಂತರ ಅಲ್ಲಿಂದ ಮಂಗಳೂರು ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

























































































































error: Content is protected !!
Scroll to Top