ಕಾರ್ಕಳ : ಕಲಂಬಾಡಿ ಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ದಾನಿಗಳಿಂದ ಕೊಡಮಾಡಲ್ಪಟ್ಟ ಬ್ಯಾಗ್ ಹಾಗೂ ರೋಟರಿ ಕ್ಲಬ್ ಕಾರ್ಕಳ ಇವರಿಂದ ಕೊಡಮಾಡಲ್ಪಟ್ಟ ಕೊಡೆ ವಿತರಣೆ ಹಾಗೂ ವಿದ್ಯಾರ್ಥಿಗಳ ಎಫ್ಎ1 ಪರೀಕ್ಷೆಯ ಉತ್ತರ ಪತ್ರಿಕೆಗಳ ಪರಿಶೀಲನ ಕಾರ್ಯಕ್ರಮ ಆ. 5ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷೆ ಸಂಗೀತ ಬಿ. ಎನ್. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ನೂತನ ಕಟ್ಟಡ ರಚನಾ ಸಮಿತಿ ಅಧ್ಯಕ್ಷ ನವೀನ್ ನಾಯಕ್, ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ನಿಟ್ಟೆ ಗ್ರಾ. ಪಂ. ಸದಸ್ಯ ರಾಜೇಶ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷ ಸುರೇಶ್ ಆಚಾರ್ಯ, ಅಧ್ಯಕ್ಷ ರಾಜೇಶ್ ಕುಲಾಲ್, ಶಾಲಾ ಮುಖ್ಯ ಶಿಕ್ಷಕ ನಾಗರಾಜ್, ರೋಟರಿ ಕ್ಲಬ್ ಸದಸ್ಯರಾದ ಅರುಣ್ ಶೆಟ್ಟಿ, ವಸಂತ್ ಹಾಗೂ ಬಾಲಕೃಷ್ಣ ದೇವಾಡಿಗ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್ಡಿಎಂಸಿ ಸದಸ್ಯರು, ಪೋಷಕ ವರ್ಗ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕರಾದ ನಮಿತಾ ಸ್ವಾಗತಿಸಿ, ರಶ್ಮಿ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ವಿಜಯಲಕ್ಷ್ಮಿ ವಂದಿಸಿದರು.
































































