ಯೋಗಾಸನ ಸ್ಪರ್ಧೆ : ಜ್ಞಾನಸುಧಾ ವಿದ್ಯಾಸಂಸ್ಥೆಯ ಅನ್ವಿ ಮೈಸೂರು ವಿಭಾಗ ಮಟ್ಟಕ್ಕೆ

ಕಾರ್ಕಳ : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಉಡುಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ ಇವರು ಹೇರೆಂಜಾಲು ಕಂಬದಕೋಣೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನ್ವಿ ಹೆಚ್. ಅಂಚನ್‌ ವಿಜೇತರಾಗಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅನ್ವಿ ಕಾರ್ಕಳದ ಹರೀಶ್ ಹಾಗೂ ಶೋಭಾ ದಂಪತಿಯ ಪುತ್ರಿ.
ಸಾಧಕ ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂಧಿಸಿದ್ದಾರೆ.















































































error: Content is protected !!
Scroll to Top