ಕಾರ್ಕಳ : ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಕಾರ್ಕಳ ಅಂಬಾ ಭವಾನಿ ಗಾಳಿಮಾರಿ ದೇವಸ್ಥಾನದ ವಠಾರದಲ್ಲಿ ಆ. 10ರಂದು ಕೆಸರಾಟ ಪಾಠ ನಡೆಯಲಿದೆ.
ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮಹಮ್ಮದ್ ಸದಾಕತ್ ಅಧ್ಯಕ್ಷತೆ ವಹಿಸಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೆಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅವಿನಾಶ್ ಜಿ. ಶೆಟ್ಟಿ, ಉದ್ಯಮಿ ನಿರಂಜನ್ ಜೈನ್, ನ್ಯೂಸ್ ಕಾರ್ಕಳ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ಬರೆಪ್ಪಾಡಿ, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲೆ ಜಾನ್ಸಿ ಪಿ. ಎನ್., ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಮ್. ಡಿ., ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ, ಸಂಸ್ಕೃತ ವಿಭಾಗದ ಮುಖ್ಯಸ್ಥ ಅಂಬರೀಷ ಚಿಪಳೂಣಕರ ಉಪಸ್ಥಿತರಿರುವರು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.



























































