ಕಾರ್ಕಳ – ಹೆಬ್ರಿ ಉಭಯ ತಾಲೂಕಿನೆಲ್ಲೆಡೆ ವರಮಹಾಲಕ್ಷ್ಮೀ ಪೂಜಾ ಸಂಭ್ರಮ

ಕಾರ್ಕಳ : ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹಬ್ಬಗಳ ಸಂಭ್ರಮ ಪ್ರಾರಂಭವಾಗುತ್ತದೆ. ಶ್ರಾವಣ ಮಾಸದ ಎರಡನೇ ಶುಕ್ರವಾರ ಆಚರಿಸುವ ಹಬ್ಬವೇ ವರಮಹಾಲಕ್ಷ್ಮಿ. ಅಂತೆಯೇ ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬ ಸಂಭ್ರಮಾಚರಣೆ. ಈ ಹಬ್ಬವು ವಿಶೇಷವಾಗಿ ವಿವಾಹಿತ ಮಹಿಳೆಯರಿಗೆ ಮುಖ್ಯವಾದ ಹಬ್ಬ. ತಮ್ಮ ಕುಟುಂಬದ ಯೋಗಕ್ಷೇಮಕ್ಕಾಗಿ ಮಹಿಳೆಯರು ಉಪವಾಸ ಕೈಗೊಳ್ಳುವ ಮೂಲಕ ವರಮಹಾಲಕ್ಷ್ಮಿ ವ್ರತ ಕೈಗೊಳ್ಳುತ್ತಾರೆ.

ಕಾರ್ಕಳ – ಹೆಬ್ರಿ ಉಭಯ ತಾಲೂಕಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ರಾಮ ಮಂದಿರ, ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನ, ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ಬೈಲೂರು ಮಾರಿಗುಡಿ, ಹೆಬ್ರಿ ಅಮೃತ ಭಾರತಿ ವಿದ್ಯಾಸಂಸ್ಥೆ, ಸೇರಿದಂತೆ ಅಂಡಾರು, ಚಾರ, ವರಂಗ, ಮಾಳ, ಪಳ್ಳಿ, ನೀರೆ ಬೈಲೂರು, ಕಡ್ತಲ, ನಲ್ಲೂರು, ಮುಡಾರು ಬಜಗೋಳಿ ಉಭಯ ತಾಲೂಕಿನ ಹಲವೆಡೆ ಶ್ರೀ ವರಮಹಾಲಕ್ಷ್ಮೀ ಪೂಜೆಯು ಬಹಳ ಸಂಭ್ರಮದಿಂದ ಆಚರಿಸಲಾಯಿತು.

ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಾರ್ಕಳ ತಾಲೂಕು ಬೈಲೂರು ವಲಯದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಯರ್ಲಪಾಡಿ ಬೈಲೂರು ಇದರ ಆಶ್ರಯದಲ್ಲಿ 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಕೌಡೂರು ಮಾರಿಯಮ್ಮ ಸಭಾಭವನದಲ್ಲಿ ನಡೆಯಿತು.
ಸಭಾ ಕಾರ್ಯಕ್ರಮದ ಆದ್ಯಕ್ಷತೆಯನ್ನು ವಿಮಲ ಶಂಕರ ಪೂಜಾರಿ ವಹಿಸಿದ್ದರು. ಭುವನೇಂದ್ರ ಶಾಲಾ ಪ್ರಾಧ್ಯಾಪಕಿ ಸೀಮಾ ಕಾಮತ್ ಧಾರ್ಮಿಕ ಪ್ರವಚನ ನೀಡಿದರು. ಶ್ರೀ.ಕ್ಷೇ ಧ.ಗ್ರಾ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಾರ್ಕಳ ತಾಲೂಕು ಇದರ ಕೇಂದ್ರ ಸಮಿತಿ ಅಧ್ಯಕ್ಷ ಮಂಜುನಾಥ ಬೈಲೂರು, ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಾರ್ಕಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ, ಜಿಲ್ಲಾ ಜನಜಾಗ್ರತಿ ಸಮಿತಿ ಸದಸ್ಯ ಕಮಲಾಕ್ಷ ನಾಯಕ್ ಜಾರ್ಕಳ, ತಾರಾನಾಥ್ ಶೆಟ್ಟಿ ಗೋವಿಂದೂರು, ವಲಯದ ಮೇಲ್ವಿಚಾರಕಿ ಯಶೋಧ ಉಪಸ್ಥಿತರಿದ್ದರು. ನಿಕಟಪೂರ್ವ ವಲಯಾಧ್ಯಕ್ಷ ಕೆ. ಧರ್ಮರಾಜ್ ಕುಮಾರ್ ಕಾರ್ಯಕ್ರಮದ ನಿರೂಪಿಸಿದರು. ಒಕ್ಕೂಟದ ಅಧ್ಯಕ್ಷರಾದ ಶ್ರೀನಿವಾಸ್ ಪೂಜಾರಿ ಯರ್ಲಪಾಡಿ ಸ್ವಾಗತಿಸಿ, ವಿಜೇಶ್ ಪೂಜಾರಿ ಗೋವಿಂದೂರು ವಂದಿಸಿದರು.
ಬೆಳ್ಮಣ್ ನಾರಾಯಣ ಗುರು ಸಮಾಜ ಸೇವಾ ಸಂಘ ಇವರ ವತಿಯಿಂದ ಮಹಿಳಾ ವಿಭಾಗದಿಂದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನಡೆಯಿತು.
ಹೆಬ್ರಿ ಪಿ.ಆರ್.ಎನ್. ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯ ಅನ್ನಪೂರ್ಣ ಸಭಾಂಗಣದಲ್ಲಿ ವರಮಹಾಲಕ್ಷ್ಮಿ ಹಬ್ಬದ ಆಚರಣೆ ನಡೆಯಿತು.
ಸಂಸ್ಥೆಯ ಸಂಸ್ಕೃತ ಶಿಕ್ಷಕ ವೇದಾಂತ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಮಾತೃ ಮಂಡಳಿಯ ಶ್ರುತಿ, ಮಮತಾ ಹಾಗೂ ಸದಸ್ಯರು, ಸಂಸ್ಥೆಯ ಸಂಸ್ಕಾರ ಪ್ರಮುಖ್ ಮೀನಾಕ್ಷಿ, ಸಂಸ್ಥೆಯ ಮುಖ್ಯಸ್ಥರಾದ ಅರುಣ್ ಕುಮಾರ್, ಅಪರ್ಣಾ ಆಚಾರ್, ಅನಿತಾ, ಶಕುಂತಲಾ, ಮೇಲ್ವಿಚಾರಕ ರಾಘವೇಂದ್ರ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಹದಿನಾರನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ವೃತ ಪೂಜೆಯು ಶ್ರೀ ಮಠದ ಅರ್ಚಕ ವಿದ್ವಾನ್ ರಾಘವೇಂದ್ರ ಭಟ್ ಅವರ ಪೌರೋಹಿತ್ಯದಲ್ಲಿ ನಡೆಯಿತು. ಭಕ್ತಿ ಶ್ರದ್ಧೆಯಿಂದ ಪ್ರತಿನಿತ್ಯ ಲಕ್ಷ್ಮಿಯನ್ನು ಆರಾಧಿಸಿದಲ್ಲಿ ಸುಭೀಕ್ಷೆಯಿಂದ ಜೀವನ ನಡೆಸಲು ಸಾಧ್ಯ ಎಂದು ರಾಘವೇಂದ್ರ ಭಟ್ ಉಪನ್ಯಾಸ ನೀಡಿದರು. ಮುನಿಯಾಲು, ಕಾಡುಹೊಳೆ ಪರಿಸರದ ಅನೇಕ ಮಂದಿ ಮಹಿಳೆಯರು ವೃತ ಪೂಜೆಯಲ್ಲಿ ಭಾಗವಹಿಸಿದರು. ಕಾಡುಹೊಳೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷೆ ರೇವತಿ ಸೇರಿದಂತೆ ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು.









































































































error: Content is protected !!
Scroll to Top