ಆ. 13 : ಕ್ರಿಯೇಟಿವ್ ಪುಸ್ತಕಧಾರೆ – 22 ಕೃತಿಗಳ ಅನಾವರಣ

ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ʼಕ್ರಿಯೇಟಿವ್ ಪುಸ್ತಕ ಧಾರೆ – 2025ʼ ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ ಕಾರ್ಯಕ್ರಮ ಆ. 13ರಂದು ನಡೆಯಲಿದೆ. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು. ಮುಖ್ಯ ಅತಿಥಿಗಳಾಗಿ ಚಿತ್ರ ನಿರ್ದೇಶಕರು ಹಾಗೂ ಖ್ಯಾತ ಸಾಹಿತಿ ಡಾ. ನಾಗತಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಆಗಮಿಸಲಿದ್ದಾರೆ. ಕಾರ್ಕಳ ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಮಹಾಕಾವ್ಯಗಳ ಲೇಖಕ, ಮಂಡ್ಯ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಡಾ. ಪ್ರದೀಪ ಕುಮಾರ ಹೆಬ್ರಿ ಉಪಸ್ಥಿತರಿರಲಿದ್ದಾರೆ.

ಅನಾವರಣಗೊಳ್ಳಲಿರುವ ಕೃತಿಗಳು
-ಯಾತ್ರೆ – ಚಂದ್ರಕಾಂತ ಪೋಕಳೆ
-ವಿಜ್ಞಾನ ಕೌತುಕಗಳ ಮಹಾಯಾನ – ಎಲ್.ಪಿ. ಕುಲಕರ್ಣಿ
-ಹರ್ಷ ರಾಗ – ಪೌಝಿಯಾ ಸಲೀಂ
-ಹಿತಶತ್ರು – ಪದ್ಮಲತಾ ಮೋಹನ್
-ಪುಟ್ಟ ದೇವರ ಕಣ್ಣೀರು – ಸದಾಶಿವ ಸೊರಟೂರು
-ಬದುಕು ಮಾಯೆಯ ಮಾಟ – ಕುಮಾರಸ್ವಾಮಿ ತೆಕ್ಕುಂಜ
-ಕಾವ್ಯ ಧ್ಯಾನ – ನಾಗೇಶ್ ಜೆ. ನಾಯಕ
-ನಿನಗೆ ನೀನೇ ಬೆಳಕು – ಪ್ರಜ್ವಲಾ ಶೆಣೈ
-ನಿನ್ನ ಇಚ್ಛೆಯಂತೆ ನಡೆವೆ – ಮನು ಗುರುಸ್ವಾಮಿ
-ಕಣ್ಣ ಬಾಗಿಲಿಗೆ ಬಂದ ನೀರು – ಸಂತೆಬೆನ್ನೂರು ಫೈಜ್ನಟರಾಜ್
-ಸ್ವಾತಿ ಬೊಂಬಾಟ್ – ಎಂ. ಮನೋಹರ ಪೈ
-ಗ್ಯಾಂಗ್ ಸ್ಟರ್ ಮತ್ತು ಅವಳು – ಮಂಜುನಾಥ್ ಕುಂಬಾರ್
-ಇದೊಳ್ಳೆ ವರಸೆ – ಸಂದೇಶ್ ಎಚ್. ನಾಯ್ಕ್
-ಮಾಂಡವ್ಯ ದೀಪ – ಡಾ. ಪ್ರದೀಪ ಕುಮಾರ ಹೆಬ್ರಿ
-ಬೆಳ್ದೀಪ – ಡಾ. ಪ್ರದೀಪ ಕುಮಾರ ಹೆಬ್ರಿ
-ನಿಲುಕದ ನಕ್ಷತ್ರ – ಡಾ. ಸುಮತಿ ಪಿ.
-ಸಿಹಿಜೀವಿ ಕಂಡ ಅಂಡಮಾನ್ – ಸಿಹಿಜೀವಿ ಸಿ.ಜಿ ವೆಂಕಟೇಶ್ವರ
-ಅನುಭವ ದೀಪ್ತಿ – ಶುಭಲಕ್ಷ್ಮಿ ಆರ್. ನಾಯಕ್
-ಈ ಪಯಣದಲ್ಲಿ – ಶ್ಯಾಮಲಾ ಗೋಪಿನಾಥ್
-ಸಂಗೀತ ಶರಧಿ – ರಾಜೇಂದ್ರ ಭಟ್. ಕೆ.
-ಅಸಂಗತ – ಅಕ್ಷತಾ ರಾಜ್ ಪೆರ್ಲ
-ವಿಜ್ಞಾನ ವಿಶಾರದರು – ಎಲ್‌.ಪಿ ಕುಲಕರ್ಣಿ

ಸಂವಾದ ಕಾರ್ಯಕ್ರಮ
ಮಧ್ಯಾಹ್ನ 2 ಗಂಟೆಯಿಂದ 3.20 ರವರೆಗೆ ಡಾ. ನಾಗತಿಹಳ್ಳಿ ಚಂದ್ರಶೇಖರ್ ಅವರ ಚಲನಚಿತ್ರಗಳಲ್ಲಿ ಬಳಸಿರುವ ಭಾವಗೀತೆಗಳ ಗಾಯನದ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಲಿರುವುದು. ಖ್ಯಾತ ನಿರೂಪಕ ಅವಿನಾಶ್ ಕಾಮತ್ ಸಂವಾದ ಕಾರ್ಯಕ್ರಮ ನಿರ್ವಹಿಸಲಿದ್ದಾರೆ. ಜೀ ಸರಿಗಮಪ ಮತ್ತು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್‌ ಖ್ಯಾತಿಯ ಯಶವಂತ್ ಎಂ.ಜಿ ಇವರಿಂದ ಗೀತೆಗಳ ಗಾಯನ ನಡೆಯಲಿರುವುದು.

ಪುಸ್ತಕಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿದ್ದು, ಸಾಹಿತ್ಯಾಸಕ್ತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದು ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.



































































































error: Content is protected !!
Scroll to Top