ಕಾರ್ಕಳ : ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಉಡುಪಿ ಇವರು ಎಂ.ಐ.ಟಿ. ಮಣಿಪಾಲದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ತರಗತಿಯ ವಿದ್ಯಾರ್ಥಿನಿ ಭೂಮಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸಾಣೂರಿನ ಕೆ. ವಿ. ಪ್ರವೀಣ್ ಹಾಗೂ ದೀಪ್ತಿ ಪ್ರಭು ದಂಪತಿ ಪುತ್ರಿ.
ಸಾಧಕ ವಿದ್ಯಾರ್ಥಿನಿಗ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.
ಈಜು ಸ್ಪರ್ಧೆ : ಜ್ಞಾನಸುಧಾ ವಿದ್ಯಾಸಂಸ್ಥೆಯ ಭೂಮಿ ರಾಜ್ಯ ಮಟ್ಟಕ್ಕೆ























