ಆ. 17 : ಕಾರ್ಕಳ – ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ವತಿಯಿಂದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಆ. 17 ರಂದು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ ಎಂದು ಯುವಜನ ಸೇವಾ ಕ್ರೀಡಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಸ್ಪರ್ಧೆಗಳ ವಿವರ
ಪುರುಷರಿಗೆ : ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದಜಿಗಿತ, ಎತ್ತರಜಿಗಿತ, ಗುಂಡು ಎಸೆತ, ಟ್ರಿಪಲ್‌ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4100 ಮೀ. ರಿಲೇ, 4400 ಮೀ ರಿಲೇ), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್ಬಾಲ್ ಹಾಗೂ ಥ್ರೋಬಾಲ್ ಪಂದ್ಯಗಳು ನಡೆಯಲಿವೆ. (ಫುಟ್‌ಬಾಲ್ ಪಂದ್ಯಾಟವು ಆ. 16 ರಂದು ಕಾರ್ಕಳದ ಸ್ವರಾಜ್ ಮೈದಾನದಲ್ಲಿ ನಡೆಯಲಿದ್ದು, ಅಂದು ಬೆಳಗ್ಗೆ 9 ಗಂಟೆಗೆ ವರದಿ ಮಾಡಿಕೊಳ್ಳಬಹುದಾಗಿದೆ.

ಮಹಿಳೆಯರಿಗೆ : ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದಜಿಗಿತ, ಎತ್ತರಜಿಗಿತ, ಗುಂಡು ಎಸೆತ, ಟ್ರಿಪಲ್‌ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4100 ಮೀ. ರಿಲೇ, 4400 ಮೀ ರಿಲೇ), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಪಂದ್ಯಾಟಗಳು ನಡೆಯಲಿವೆ.

ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದೆ. ಸ್ಪರ್ಧೆಗೆ ಹೆಸರು ಅಥವಾ ತಂಡವನ್ನು ನೋಂದಾಯಿಸಲು ಆ. 14 ಕೊನೆಯ ದಿನ. ಕ್ರೀಡಾಕೂಟ ನಡೆಯುವ ದಿನದಂದು ನೋಂದಣಿಗೆ ಅವಕಾಶ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಾರ್ಕಳ ತಾಲೂಕು ಯುವಜನ ಕ್ರೀಡಾಧಿಕಾರಿ ಮೊ.ನಂ: 9008857495 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.































































































error: Content is protected !!
Scroll to Top