ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ – ಮಾನವ ಹಕ್ಕುಗಳ ಆಯೋಗ ಎಂಟ್ರಿ

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ ಪ್ರಕರಣ ಸಂಬಂಧಿಸಿದಂತೆ ದೂರುದಾರ ವ್ಯಕ್ತಿಯ ವಿಚಾರಣೆ ನಡೆಯುತ್ತಿದೆ. ಎಸ್‌ಐಟಿ ಈಗಾಗಲೇ ಅರ್ಧ ತಿಂಗಳು ಕೆಲಸ ಮಾಡಿದೆ. ಜಿಪಿಆರ್ ಮೂಲಕ ಶೋಧಕಾರ್ಯ ನಡೆಯುತ್ತಿರುವಾಗಲೇ ಪ್ರಕರಣಕ್ಕೆ ಮಾನವ ಹಕ್ಕುಗಳ ಆಯೋಗ ಎಂಟ್ರಿ ಕೊಟ್ಟಿದೆ.

ಎಸ್‌ಐಟಿ ಅಧಿಕಾರಿಗಳು ಬಹಳ ಮುತುವರ್ಜಿಯಿಂದ ಎಲ್ಲಾ ತನಿಖೆಗಳ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಪ್ರತ್ಯಕ್ಷ ಸಾಕ್ಷಿಗಳು ಮತ್ತು ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಪಂಚಾಯತ್ ಠಾಣೆ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಆ ಕಾಲಮಾನದಲ್ಲಿ ಕೆಲಸ ಮಾಡಿದ ಎಲ್ಲರ ಸಾಕ್ಷಿಗಳ ಸಂಗ್ರಹ ನಡೆಸಲಾಗುತ್ತಿದೆ. ಈ ನಡುವೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಧರ್ಮಸ್ಥಳಕ್ಕೆ ಭೇಟಿ ನೀಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಬೀಡು ಬಿಟ್ಟ ನಾಲ್ವರು ಅಧಿಕಾರಿಗಳ ತಂಡದಲ್ಲಿ ಓರ್ವ ಐಪಿಎಸ್ ಅಧಿಕಾರಿಯಿದ್ದಾರೆ.

ವಿವಿಧ ಆಯಾಮಗಳಲ್ಲಿ ದಾಖಲೆ ಮತ್ತು ಮಾಹಿತಿಗಳ ಸಂಗ್ರಹ ಮಾಡುತ್ತಿದ್ದಾರೆ. ಎಸ್‌ಐಟಿ, ಪೊಲೀಸ್ ಸ್ಟೇಷನ್, ದೇವಸ್ಥಾನ, ಗ್ರಾಮ ಪಂಚಾಯತ್‌ನಿಂದ ದಾಖಲೆಗಳನ್ನು ಕೇಳಿದ ಮಾನವ ಹಕ್ಕುಗಳ ಆಯೋಗ, ಸ್ವಚ್ಛತಾ ಕಾರ್ಮಿಕರಿಂದ ಹೇಳಿಕೆಗಳನ್ನು ಸಂಗ್ರಹ ಮಾಡುತ್ತಿದೆ. ಆಯೋಗ ಗೌಪ್ಯವಾಗಿ ಹಲವರ ಭೇಟಿ ಮಾಡಿ ವಿಚಾರಣೆಗೈದಿದೆ. ಮುಂದಿನ ನಾಲ್ಕೈದು ದಿನ ಧರ್ಮಸ್ಥಳದಲ್ಲಿ ಬೀಡು ಬಿಡಲಿರುವ ಮಾನವ ಹಕ್ಕುಗಳ ಆಯೋಗ ಹಲವಾರು ಆಯಾಮಗಳಲ್ಲಿ ತನಿಖೆ ನಡೆಸಿ ವರದಿ ಸಿದ್ಧಪಡಿಸಲಿದೆ ಎಂದು ವರದಿಯಾಗಿದೆ.























































































































error: Content is protected !!
Scroll to Top