ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಉಪನಿರ್ದೇಶಕರ ಕಚೇರಿ ಉಡುಪಿ ಇವರ ಆಶ್ರಯದಲ್ಲಿ ಮಣಿಪಾಲದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ 14/17ರ ವಯೋಮಿತಿಯ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ಶೈನಿ ಡಿಸೋಜ ರಾಜ್ಯ ಟ್ಟಕ್ಕೆ ಆಯ್ಕೆಯಾಗಿದ್ದಾರೆ.
200 ಮೀ ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿ ಪದಕ, 100 ಮೀ. ಫ್ರೀ ಸ್ಟೈಲ್ ಮತ್ತು 100 ಮೀ ಬ್ಯಾಕ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕಗಳನ್ನು ಪಡೆದುಕೊಳ್ಳುವುದರ ಮೂಲಕ ಶೈನಿ ಡಿಸೋಜ ರಾಜ್ಯಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಉಳಿದಂತೆ 9ನೇ ತರಗತಿಯ ಶಾನ್ ಡಿಸೋಜ 50ಮೀ ಫ್ರೀ ಸ್ಟೈಲ್ ಮತ್ತು 50ಮೀ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕ, 6ನೇ ತರಗತಿಯ ಸಿಯಾ ಜೋನ್ನಾ ಅಂಚನ್ 50ಮೀ ಫ್ರೀ ಸ್ಟೈಲ್‌ನಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.






















