ತಾಲೂಕಿನೆಲ್ಲೆಡೆ 79ನೇ ಸ್ವಾತಂತ್ರೋತ್ಸವ ಸಂಭ್ರಮ

ಕಾರ್ಕಳ : ಕಾರ್ಕಳ – ಹೆಬ್ರಿ ತಾಲೂಕಿನೆಲ್ಲೆಡೆ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಸಂಘ ಸಂಸ್ಥೆಗಳಲ್ಲಿ ಕಾರ್ಯಕ್ರಮಗಳು ಜರುಗಿತು.

ತಾಲೂಕು ಕಚೇರಿ

ಜ್ಞಾನಸುಧಾ ವಿದ್ಯಾಸಂಸ್ಥೆ

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರುಗಿದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಪದ್ಮಶ್ರೀ ಡಾ.ಎಂ.ಎಂ. ಜೋಷಿ ಸೇವಾ ಪ್ರಶಸ್ತಿ ಪುರಸ್ಕೃತ ನೇತ್ರತಜ್ಞ ಡಾ. ಶ್ರೀನಿವಾಸ್‌ ದೇಶಪಾಂಡೆ ನೆರವೇರಿಸಿದರು, ಬಳಿಕ ಮಾತನಾಡಿದ ಅವರು ಲಕ್ಷಾಂತರ ದೇಶಪ್ರೇಮಿಗಳ ತ್ಯಾಗ, ಬಲಿದಾನಗಳಿಗೆ ನಾವು ಧನ್ಯವಾದ ಹೇಳುತ್ತಾ, ಅವರ ಚಿರಸ್ಮರಣೆಗೈಯ್ಯುವ ಶುಭದಿನವಿಂದು. ಸ್ವಾತಂತ್ರ್ಯವೆಂಬುದು ಉಚಿತವಾಗಿ ದೊರೆತುದಲ್ಲ. ಅದೊಂದು ಜವಾಬ್ದಾರಿಯ ಸಂಕೇತ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪಿ.ಆರ್.ಒ. ಜ್ಯೋತಿ ಪದ್ಮನಾಭ್ ಭಂಡಿ, ಪಿ.ಯು. ಉಪಪ್ರಾಂಶುಪಾಲರಾದ ಸಾಹಿತ್ಯ, ಉಷಾ ರಾವ್‌ ಯು., ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲಾ ಉಪಪ್ರಾಂಶುಪಾಲೆ ವಾಣಿ ಕೆ. ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕ ಪ್ರಸಾದ್‌ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರ್ ವಂದಿಸಿದರು.

ಕ್ರೈಸ್ಟ್‌ಕಿಂಗ್‌

ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಯಲ್ಲಿ ಭಾರತೀಯ ವಾಯುಸೇನೆಯ ಮಾಜಿ ಯೋಧ ಡಾ. ನವೀನ್ ಅಮಾನ್ನ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಸ್ವಾತಂತ್ರ್ಯ ಎಂದರೆ ಕೇವಲ ಬೇಡಿಗಳಿಂದ ಮುಕ್ತವಾಗುವುದು ಮಾತ್ರವಲ್ಲ, ಅದು ಜವಾಬ್ದಾರಿಯ ಪ್ರತೀಕವಾಗಿದೆ. ನಾವು ಪ್ರತಿಯೊಬ್ಬರೂ ದೇಶವನ್ನು ಪ್ರಗತಿಯ ಮಾರ್ಗದಲ್ಲಿ ಕೊಂಡೊಯ್ಯುವ ಸೇನಾನಿಗಳಾಗಬೇಕು ಎಂದು ಹೇಳಿದರು. ಸಂಸ್ಥೆಯ ಪದವಿ ಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ. ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ ಉಪಸ್ಥಿತರಿದ್ದರು. ಪ್ರೌಢಶಾಲಾ ಶಿಕ್ಷಕಿ ಸ್ವಾತಿ ಶೆಟ್ಟಿ ಸ್ವಾಗತಿಸಿದರು, ಪ್ರಾಥಮಿಕ ಶಾಲಾ ಶಿಕ್ಷಕಿ ಜೆಸ್ಲಿನ್ ಡಿ’ಸೋಜ ಕಾರ್ಯಕ್ರಮ ನಿರೂಪಿಸಿದರು. ಪದವಿ ಪೂರ್ವ ವಿಭಾಗದ ಆಂಗ್ಲಭಾಷಾ ಉಪನ್ಯಾಸಕಿ ಶಿಜಿ.ಸಿ.ಕೆ ವಂದಿಸಿದರು.

ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆ

ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹೆಬ್ರಿ ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಸದಾಶಿವ ಸೇರ್ವೆಗಾರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ನಮಗೆ ದೊರೆತಿರುವ ಈ ಸ್ವಾತಂತ್ರ್ಯ ಸಾಕಷ್ಟು ಜನರ ತ್ಯಾಗ ಬಲಿದಾನದ ಫಲಶ್ರುತಿ. ಈ ಸ್ವಾತಂತ್ರ್ಯ ವನ್ನು ಉಳಿಸಿಕೊಳ್ಳುವುದು ಯುವ ಜನತೆಯ ಕೈಯಲ್ಲಿ ಇದೆ. ಭಾರತ ವಿಶ್ವದ ಬಲಿಷ್ಠ ಶಕ್ತಿಯಾಗಿ ಬೆಳೆಯುತ್ತಿರುವ ಈ ಸಂದರ್ಭದಲ್ಲಿ ಕೆಲವು ವಿದೇಶಿ ಶಕ್ತಿಗಳು ನಮ್ಮ ವಿರುದ್ಧ ಸಂಚು ಹೂಡುವುದನ್ನು ಕಾಣುತ್ತಿದ್ದೇವೆ. ನಾವೆಲ್ಲ ಭಾರತೀಯರು ಅದರ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಮೃತ ಭಾರತಿ ಟ್ರಸ್ಟ್‌ ಅಧ್ಯಕ್ಷ ಸಿಎ ಎಂ. ರವಿ ರಾವ್, ಸ್ಥಾಪಕ ಅಧ್ಯಕ್ಷ ಸತೀಶ್ ಪೈ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ, ಟ್ರಸ್ಟಿಗಳಾದ ಬಾಲಕೃಷ್ಣ ಮಲ್ಯ, ಯೋಗೀಶ್ ಭಟ್, ಸುಧೀರ್ ನಾಯಕ್, ವಿಷ್ಣುಮೂರ್ತಿ ನಾಯಕ್, ಲಕ್ಷ್ಮಣ್ ಭಟ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಸೇರಿದಂತೆ ಎರಡೂವರೆ ಸಾವಿರ ಮಂದಿ ಪಾಲ್ಗೊಂಡಿದ್ದರು. ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಲಯನ್ಸ್ ಕ್ಲಬ್ ಕಾರ್ಕಳ ಸಿಟಿ

ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ತಂಡ ಚೇತನ ವಿಶೇಷ ಶಾಲಾ ಮಕ್ಕಳೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಲಯನ್ಸ್‌ ಕ್ಲಬ್‌ ಅಧ್ಯಕ್ಷ ಗೋಪಾಲ್ ಅಂಚನ್, ಕಾರ್ಯದರ್ಶಿ ನಿಹಾಲ್ ಶೆಟ್ಟಿ ಜಕ್ಕನ್ಮಕ್ಕಿ, ಸ್ಥಾಪಕಾಧ್ಯಕ್ಷೆ ಜ್ಯೋತಿ ರಮೇಶ್, ಸದಸ್ಯರಾದ ಲಯನ್ ಯೋಗೇಶ್ ನಾಯಕ್, ನಯನ ನಾಯಕ್, ಮಂಜುನಾಥ್, ಸುಜಾತಾ ಹಾಗೂ ಮಂಜುನಾಥ್ ಉಪಸ್ಥಿತರಿದ್ದರು.

ಕಲ್ಲಗುಪ್ಪೆ ಶಾಲೆ

ಕಲ್ಲಗುಪ್ಪೆ ಸ.ಹಿ.ಪ್ರಾ.ಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಗಣೇಶ್ ಸಾಲಿಯನ್, ನಿವೃತ್ತ ಇಸ್ರೋ ವಿಜ್ಞಾನಿ ಜನಾರ್ಧನ್ ಇಡ್ಯಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜಿತ್ ಕುಮಾರ್, ಕಸ್ತೂರಿ ಪೂವಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ದೇವಿ ಜಂಟಿಯಾಗಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಎಸ್‌.ಡಿ.ಎಂ.ಸಿ ಉಪಾಧ್ಯಕ್ಷೆ ದೀಪ್ತಿ ದಿನೇಶ್, ಶಾಲಾ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುಮಿತ್ರ ಇ., ಪಂಚಾಯಿತಿ ಸದಸ್ಯರಾದ ಇಂದಿರಾ, ಸುಕುಮಾರ್ ದೇವಾಡಿಗ, ಚಿನ್ನಸ್ವಾಮಿ, ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಮನೋಹರ್ ಪ್ರಾಸ್ತವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಶಿಕ್ಷಕಿಯರಾದ ಸುನಂದಾ ಕಾರ್ಯಕ್ರಮ ನಿರೂಪಿಸಿ, ಮಂಜುಳಾ ವಂದಿಸಿದರು. ವನಿತಾ, ಅಶ್ವಿನಿ ಹಾಗೂ ಆಶಾಲತಾ ಸಹಕರಿಸಿದರು.

ಮಾಳ ಗುರುಕುಲ ಶಾಲೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಶಾಲಾ ಸಂಚಾಲಕ ಸುಧಾಕರ ಡೋಂಗ್ರೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ರವಿಶಂಕರ್ ಸೇರಿಗಾರ್ ಉಪಸ್ಥಿತರಿದ್ದರು. ಶಿಕ್ಷಕಿಯರಾದ ರಕ್ಷಿತಾ ಸ್ವಾಗತಿಸಿ, ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು. ಶುಭ ವಂದಿಸಿದರು.





























































































error: Content is protected !!
Scroll to Top