ಕಾರ್ಕಳ : ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಜರಗಿತು. ಶಾಲಾ ಸಂಚಾಲಕ ನರೇಂದ್ರ ಕಾಮತ್ ಕೆ., ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿದರು. ಪ್ರೌಢಶಾಲಾ ಮುಖ್ಯಶಿಕ್ಷಕ ನಾರಾಯಣ ಶೆಣೈ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ವಿದ್ಯಾ ಕಿಣಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ
























