ಕಾರ್ಕಳ : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನಪ್ಪಿದ ದುರ್ಘಟನೆ ಆ. 17ರಂದು ಬೆಳ್ಮಣ್ ಗ್ರಾಮದಲ್ಲಿ ಸಂಭವಿಸಿದೆ. ದೇವಸ್ಯ ಕೆಳಗಿನ ಮನೆಯ ಫ್ಲೋರಿನ್ ಮಥಾಯಸ್ (71) ಮೃತ ಮಹಿಳೆ. ಇವರು ಕಳೆದ 35 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಪ್ರತಿದಿನ ಬೆಳಿಗ್ಗೆ ಮನೆಯ ಅಂಗಳದಲ್ಲಿ ವಾಕಿಂಗ್ ಮಾಡುವ ಅಭ್ಯಾಸ ಹೊಂದಿದ್ದ ಫ್ಲೋರಿನ್ ಅವರು ಆ. 17ರಂದು ಬೆಳಿಗ್ಗೆ ವಾಕಿಂಗ್ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಾನಸಿಕ ಕಾಯಿಲೆಯಿಂದ ಬಳುತ್ತಿದ್ದ ಮಹಿಳೆ ಬಾವಿಗೆ ಬಿದ್ದು ಸಾವು




























