ಆ. 23ರವರೆಗೆ ಭಾರೀ ಮಳೆ – ಉಡುಪಿ ಸೇರಿದಂತೆ 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಬೆಳಗಾವಿ ಮತ್ತು ಹಾವೇರಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಬಳ್ಳಾರಿ ಜೊತೆಗೆ ಬೆಂಗಳೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಲವಾದ ಗಾಳಿಯೊಂದಿಗೆ ಮಧ್ಯಮ ಹಾಗೂ ನಿರಂತರ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಮುಂಗಾರು ಮಳೆ ರಾಜ್ಯದಾದ್ಯಂತ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.









































































































error: Content is protected !!
Scroll to Top