ಸಂಜೆಯೊಳಗೆ ಮಹೇಶ್‌ ಶೆಟ್ಟಿ ತಿಮರೋಡಿಯ ಬಂಧನಕ್ಕೆ ಗೃಹಸಚಿವ ಪರಮೇಶ್ವರ್‌ ಸೂಚನೆ

ಬೆಂಗಳೂರು : ಇಂದು ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ್‌ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂದು ಸದನದಲ್ಲಿ ತಿಮರೋಡಿ ಹೇಳಿಕೆ ಬಗ್ಗೆ ಚರ್ಚೆ ನಡೆದಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಸೂಚಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ತಿಮರೋಡಿ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವರು ನೀಡಿರುವ ಸೂಚನೆಯ ಮೇರೆಗೆ, ಪೊಲೀಸರು ತಿಮರೋಡಿ ವಿರುದ್ಧ ಎಫ್‌ಐಆರ್ ದಾಖಲಿಸಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.









































































































error: Content is protected !!
Scroll to Top