ಇನ್ನಾ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ – ಮುದ್ದು ಕೃಷ್ಣ ಸ್ಪರ್ಧೆ

ಕಾರ್ಕಳ : ಇನ್ನಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಗ್ರಾಮದ ಪುಟಾಣಿ ಮಕ್ಕಳಿಗೆ ಮುದ್ದು ಕೃಷ್ಣ ಸ್ಪರ್ಧೆ ಆ. 17ರಂದು ನಡೆಯಿತು. ನಿವೃತ್ತ ಶಿಕ್ಷಕ ಬಿ. ನಾಗೇಶ್ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪಠ್ಯದ ಶಿಕ್ಷಣದ ಜೊತೆ ಜೊತೆಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಪೂರಕವಾದ ವಾತಾವರಣವನ್ನು ಶಿಕ್ಷಣ ಸಂಸ್ಥೆಯಲ್ಲಿ ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಚಟುವಟಿಕೆ ಶ್ಲಾಘನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಶ ಆರ್. ಮೂಲ್ಯ ಮಾತನಾಡಿ, 119 ವರ್ಷಗಳ ಇತಿಹಾಸವಿರುವ ಇನ್ನಾ ಹಿರಿಯ ಪ್ರಾಥಮಿಕ ಶಾಲೆಯ ಸರ್ವತೋಮುಖ ಪ್ರಗತಿಯಲ್ಲಿ ಹಳೆ ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ಸಹಕಾರ ಮಹತ್ತರವಾದದುದು. ಮುಂದೆಯೂ ಶಾಲೆಯ ಅಭಿವೃದ್ಧಿ ಮತ್ತು ಬೆಳವಣಿಗೆಗೆ ನಾವೆಲ್ಲರೂ ಸೇರಿ ಕೆಲಸ ಮಾಡೋಣ ಎಂದರು.

ಮುದ್ದು ಕೃಷ್ಣ ಸ್ಪರ್ಧೆಯ ಬಹುಮಾನದ ವಿತರಣಾ ಕಾರ್ಯಕ್ರಮದಲ್ಲಿ ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ ಸಿಇಓ ಅರುಣ್ ರಾವ್, ಇನ್ನಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಿತಾ ಶೆಟ್ಟಿ, ಮುದ್ದಾಣು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದಿವಾಕರ ಆರ್. ಶೆಟ್ಟಿ, ಇನ್ನಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯ ಎಸ್. ಕೋಟ್ಯಾನ್, ಸುಲೋಚನಾ ಕೋಟ್ಯಾನ್, ಎಂ.ವಿ.ಶಾಸ್ತ್ರಿ ಪ್ರೌಢಶಾಲೆ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಕ್ ಕೋಟ್ಯಾನ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ, ಮುಂಡ್ಕೂರು ಕ್ಲಸ್ಟರ್ ಮಟ್ಟದ ಸಂಪನ್ಮೂಲ ವ್ಯಕ್ತಿ ಶ್ರೀಕಾಂತ್ ಮೂಲ್ಯ ಹಾಗೂ ಸಂಸ್ಥೆಯ ಹಿರಿಯ ಹಳೆ ವಿದ್ಯಾರ್ಥಿ ಶ್ರೀ ಈಶ್ವರ್ ಶೆಟ್ಟಿ, ಸಂಘದ ಕೋಶಾಧಿಕಾರಿ ರಾಕೇಶ್ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಹರೀಶ್ ಶೆಟ್ಟಿ ದಡ್ಡುಮನೆ ಸ್ವಾಗತಿಸಿದರು. ವಿಜಯ್ ರಾವ್ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಸಂದೀಪ್ ಶೆಟ್ಟಿ ವಂದಿಸಿದರು.





























































































































error: Content is protected !!
Scroll to Top