ಕರಾವಳಿ ಜಿಲ್ಲೆಗಳ ಶೈಕ್ಷಣಿಕ ಸಾಧನೆ ಅಭಿನಂದನೀಯ – ಲೋಕೇಶ್ ಸಿ.

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆಯು ಶೈಕ್ಷಣಿಕ ಅಭಿವೃದ್ಧಿಯ ದೃಷ್ಟಿಯಿಂದ ಕಾಲಕಾಲಕ್ಕೆ ವಿನೂತನ ಯೋಜನೆಯಗಳನ್ನು ಜಾರಿಮಾಡುತ್ತಿದೆ. ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಶಿಕ್ಷಣ ಸಂಸ್ಥೆಗಳ, ಅಧ್ಯಾಪಕರ, ಹೆತ್ತವರ ಎಲ್ಲರ ಸಂಘಟಿತ ಪ್ರಯತ್ನ ಅಗತ್ಯ. ಕರಾವಳಿ ಕರ್ನಾಟಕದಲ್ಲಿ ಜಾಗೃತ ಸಮಾಜ ಇದ್ದು, ಇಲ್ಲಿನ ಜನತೆಯ ಪ್ರೋತ್ಸಾಹದಿಂದಾಗಿ ಕರಾವಳಿಯ ಜಿಲ್ಲೆಗಳು ಇಂದು ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯ ಸ್ಥಾನದಲ್ಲಿರುವುದು ಅಭಿನಂದನೀಯ ಎಂದು ಉಡುಪಿ ಜಿಲ್ಲೆಯ ಶಿಕ್ಷಣ ಉಪ ನಿರ್ದೇಶಕ ಲೋಕೇಶ್ ಸಿ. ಅಭಿಪ್ರಾಯಪಟ್ಟರು.

ಅವರು ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕಾರ್ಕಳ ತಾಲೂಕು ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರಯುಕ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ, ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘ ಇದರ ಜಂಟಿ ಆಶ್ರಯದಲ್ಲಿ ಆ.17ರಂದು ಬಂಡಿಮಠದ ಸರಕಾರಿ ನೌಕರರ ಸಭಾಭವನದಲ್ಲಿ ನಡೆದ ಸಾಧನಾ ಸಂಭ್ರಮ 2024-25 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಮಾತನಾಡಿ, ದಾಖಲೆಯ ಫಲಿತಾಂಶಕ್ಕೆ ಕಾರಣರಾದ ಎಲ್ಲರನ್ನೂ ಅಭಿನಂದಿಸಿದರು.

ಸನ್ಮಾನ
ಕಳೆದ ಶೈಕ್ಷಣಿಕ ವರ್ಷದಲ್ಲಿ ನಿವೃತ್ತರಾದ ಐವರು ಮುಖ್ಯೋಪಾಧ್ಯಾಯರು ಹಾಗೂ ಮೂವರು ಸಹಶಿಕ್ಷಕರನ್ನು ಮತ್ತು ಡಯಟ್ ಸಂಸ್ಥೆಯ ನಿವೃತ್ತ ಹಿರಿಯ ಉಪನ್ಯಾಸಕ ಸುಬ್ರಹ್ಮಣ್ಯ ಭಟ್ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ನೂರು ಶೇಕಡಾ ಫಲಿತಾಂಶವನ್ನು ಪಡೆದ ತಾಲೂಕಿನ 14 ಶಾಲೆಗಳನ್ನು ಅಭಿನಂದಿಸಲಾಯಿತು. ಹಾಗೆಯೇ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದ ನಾಲ್ಕು ವಿದ್ಯಾರ್ಥಿಗಳನ್ನು ಹಾಗೂ ಉಡುಪಿ ಜಿಲ್ಲೆಯ ಎಸ್ಸೆಸೆಲ್ಸಿ ನೋಡಲ್ ಅಧಿಕಾರಿ ಬಾಲಕೃಷ್ಣ ಮತ್ತು ಕಾರ್ಕಳ ತಾಲೂಕು ನೋಡಲ್ ಅಧಿಕಾರಿ ಬಾಲಕೃಷ್ಣ ಅವರನ್ನು ಸನ್ಮಾನಿಸಲಾಯಿತು. ಸ್ವರ್ಣಲತಾ, ಸ್ಮಿತಾ ಭಂಡಾರಿ, ಚಂದ್ರಶೇಖರ್ ಭಟ್, ಉಷಾ ಪಡಿವಾಳ್ ಸನ್ಮಾನಿತರನ್ನು ಪರಿಚಯಿಸಿದರು.

ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಆನಂದ ಅಭಿನಂದನಾ ಭಾಷಣ ಮಾಡಿದರು. ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಮುಖ್ಯಸ್ಥ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು. ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಭಾಸ್ಕರ್ ಸ್ವಾಗತಿಸಿದರು. ರಾಜೇಂದ್ರ ಭಟ್ ಕೆ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರ ಸಂಘದ ಕಾರ್ಯದರ್ಶಿ ಸದಾಶಿವ ಬಾಯರಿ ವಂದಿಸಿದರು.









































































































error: Content is protected !!
Scroll to Top