ತರುಣ ಭಾರತ – ಶೈಕ್ಷಣಿಕ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮ

ಕಾರ್ಕಳ : ತರುಣ ಭಾರತ ಚಾರಿಟೇಬಲ್ ಟ್ರಸ್ಟ್ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆರ್ಮುಂಡೆ ಇವರ ಸಂಯುಕ್ತ ಆಶ್ರಯದಲ್ಲಿ ಆ. 15ರಂದು 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಮತ್ತು ಶೈಕ್ಷಣಿಕ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯರಾದ ಹೆಚ್. ಆನಂದ ಹೆಗ್ಡೆಯವರು ಧ್ವಜಾರೋಹಣ ನೆರವೇರಿಸಿದರು.

ತರುಣ ಭಾರತ ಚಾರಿಟೇಬಲ್ ಟ್ರಸ್ಟ್ ಹೆರ್ಮುಂಡೆ ಇವರ ನೇತೃತ್ವದಲ್ಲಿ ಎಸ್ಸೆಸೆಲ್ಸಿ ನಂತರದ ಗ್ರಾಮದ 75 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ವಿತರಿಸಲಾಯಿತು. ಜೀವನದಾಸ್ ನಾಯಕ್, ಶ್ರೀನಿವಾಸ ಆಚಾರ್ಯ, ಗ್ರಾಮ ಪಂಚಾಯತ್ ಸದಸ್ಯ ಕುರುಂಬಿಲ, ಸಜನ್ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಶ್ರೀಕಾಂತ ಭಟ್ ಸ್ವಾಗತಿಸಿ, ಸತೀಶ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂತೋಷ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಅಶ್ವಿನಿ ಶೆಟ್ಟಿ ವಂದಿಸಿದರು.























































































































error: Content is protected !!
Scroll to Top