ಬೈಲೂರು ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ

ಕಾರ್ಕಳ : ಹೊಟೇಲ್‌ ಉದ್ಯಮಿ ಬೈಲೂರಿನ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ರಾಡಿಯ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಪುತ್ರ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಬೈಲೂರು – ಕೌಡೂರು ಮಾರಿಯಮ್ಮ ದೇವಸ್ಥಾನದ ನಾಯರ್‌ಬೆಟ್ಟು ಧಾರ್ಮಿಕ ಸೇವಾ ಸಮಿತಿಯ ಕಾರ್ಯದರ್ಶಿಯಾಗಿದ್ದ ಕೃಷ್ಣರಾಜ ಹೆಗ್ಡೆ ಅವರು ಉಡುಪಿ ಮಣಿಪಾಲದಲ್ಲಿ ಹೊಟೇಲ್‌ ಉದ್ಯಮ ನಡೆಸಿಕೊಂಡಿದ್ದು, ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹಿರಿಯಡ್ಕ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

a href="#" target="_blank">







































error: Content is protected !!
Scroll to Top