ಗಾಳಿ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಾದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರಕಾರಕ್ಕೆ ಶಾಸಕ ಸುನಿಲ್‌ ಕುಮಾರ್ ಮನವಿ‌

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆ. 18ರಂದು ಸುರಿದ ಗಾಳಿ ಮಳೆಯಿಂದಾಗಿ ಸುಮಾರು ನೂರಕ್ಕೂ ಹೆಚ್ಚಿನ ವಾಸದ ಮನೆ, ಬೆಳೆ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಅಪಾರ ಹಾನಿ ಉಂಟಾಗಿದ್ದು, ತುರ್ತು ಪರಿಹಾರ ಒದಗಿಸುವಂತೆ ಆ. 19ರಂದು ಕಾರ್ಕಳ ಶಾಸಕ ಸುನಿಲ್‌ ಕುಮಾರ್ ಸರಕಾರಕ್ಕೆ ಮನವಿ‌ ಸಲ್ಲಿಸಿದ್ದಾರೆ.

ಕಾರ್ಕಳ ತಾಲೂಕಿನ ಬೆಳ್ಮಣ್‌, ಸೂಡ, ನಂದಳಿಕೆ, ರೆಂಜಾಳ, ಬೈಲೂರು, ಕಡ್ತಲ ಹಾಗೂ ಯರ್ಲಪಾಡಿ ಗ್ರಾಮಗಳ ಪರಿಸರದಲ್ಲಿ ಮತ್ತು ಹೆಬ್ರಿ ತಾಲೂಕಿನ ಚಾರ, ಕುಚ್ಚೂರು ಮತ್ತು ಮುದ್ರಾಡಿ ಗ್ರಾಮಗಳ ಪರಿಸರದಲ್ಲಿ ನಿನ್ನೆಯ ಸಂಜೆಯ ಹೊತ್ತಿಗೆ ಒಮ್ಮೆಲೆ ಬಂದ ಸುಂಟರಗಾಳಿ ಹಾಗೂ ಅತಿಯಾದ ಮಳೆ ಗಾಳಿಯಿಂದ ಆ ಪ್ರದೇಶದ ಹಲವು ಕಡೆಗಳಲ್ಲಿ ವಾಸದ ಮನೆಗಳು, ಕೃಷಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾಗಿದ್ದು, ತುರ್ತು ಪರಿಹಾರೋಪಾಯಗಳನ್ನು ಒದಗಿಸುವುದು ತುಂಬಾ ಅವಶ್ಯಕವಾಗಿರುವುದನ್ನು ಮನಗಂಡ ಸುನಿಲ್‌ ಕುಮಾರ್‌ ವಿಧಾನ ಸಭಾ ಅಧಿವೇಶನ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುತ್ತಾರೆ.

ಪ್ರಾಕೃತಿಕ ವಿಕೋಪದಿಂದ, ಪ್ರಮುಖವಾಗಿ ವಾಸದ ಮನೆಗಳಿಗೆ ಆಗಿರುವ ಹಾನಿಗೆ ಸಂಬಂದಿಸಿದಂತೆ ಸಚಿವರಿಗೆ ಮಾಹಿತಿ ನೀಡಿ, ತುರ್ತು ಅನುದಾನವನ್ನು ಬಿಡುಗಡೆ ಮಾಡುವಂತೆ ಹಾಗೂ ಶೀಘ್ರವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರು ಮನವಿ ಮಾಡಿರುತ್ತಾರೆ.





























































































































error: Content is protected !!
Scroll to Top