ಜ್ಞಾನಸುಧಾ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ಜನ್ಮ ದಿನಾಚರಣೆಯಂಗವಾಗಿ ರಕ್ತದಾನ ಶಿಬಿರ – 83ಯೂನಿಟ್ ಸಂಗ್ರಹ

ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆ. 21ರಂದು ಹಳೇವಿದ್ಯಾರ್ಥಿ ಸಂಘ ಜ್ಞಾನಸುಧಾ ಕಾರ್ಕಳ ಹಾಗೂ ಕೆ.ಎಂ.ಸಿ. ಬ್ಲಡ್‌ಸೆಂಟರ್‌ನ ಸಹಯೋಗದೊಂದಿಗೆ ರಕ್ತದಾನ ಶಿಬಿರ ಜ್ಞಾನಸುಧಾ ಕಾಲೇಜಿನ ಆವರಣದಲ್ಲಿ ಜರುಗಿತು.

ರಕ್ತದಾನ ಶಿಬಿರವನ್ನು ಕಸ್ತೂರ್ಬಾ ಹಾಸ್ಪಿಟಲ್ ರಕ್ತನಿಧಿ ಹಾಗೂ ಎಚ್.ಬಿ.ಟಿ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಡಾ. ಗಣೇಶ್ ಮೋಹನ್ ಉದ್ಘಾಟಿಸಿ ಮಾತನಾಡಿದ ಅವರು ರಕ್ತದಾನ ಮಹಾದಾನವಾಗಿದೆ, ಜ್ಞಾನಸುಧಾ ಸಂಸ್ಥೆಯು ಸಂಸ್ಥಾಪಕರ ದಿನಾಚರಣೆಯನ್ನು ಸಾಮಾಜಿಕ ಕಾರ್ಯಕ್ರಮದ ಮೂಲಕ ಕೈಗೊಳ್ಳುತ್ತಿರುವ ಸೇವೆ ಶ್ಲಾಘನೀಯ ಎಂದರು. ರಕ್ತದಾನ ಶಿಬಿರದಿಂದ 83 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಮುಖ್ಯ ಕಾರ್ಯನಿರ್ವಣಾಧಿಕಾರಿ ದಿನೇಶ್ ಎಂ. ಕೊಡವೂರ್, ಉಪಪ್ರಾಂಶುಪಾಲರಾದ ಸಾಹಿತ್ಯ, ಉಷಾ ರಾವ್ ಯು., ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು. ಮತ್ತು ಹಿತೈಶಿ ದೇವೇಂದ್ರ ನಾಯ್ಕ್ ಉಪಸ್ಥಿತರಿದ್ದರು. ಸಂಸ್ಥೆಯ ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕ ವಿನಯಚಂದ್ರ
ನಿರೂಪಿಸಿ ವಂದಿಸಿದರು.











































error: Content is protected !!
Scroll to Top