ಮಂಗಳೂರು : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ಉಜಿರೆಯಲ್ಲಿರುವ ಅವರ ಮನೆಯಲ್ಲೇ ವಶಕ್ಕೆ ಪಡೆದಿದೆ.









































