ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆಗಳು ಶುರುವಾಗಿವೆ. 2025ರ ದಸರಾ ಚಟುವಟಿಗಳ ಸಿದ್ದತೆ ಈಗಾಗಲೇ ಆರಂಭಗೊಂಡಿದ್ದು, ಸೆ. 22ರಂದು ಚಾಲನೆ ಸಿಗಲಿದೆ. ಇನ್ನು ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬಾನು ಮುಷ್ತಾಕ್​ ಅವರ ಹೃದಯ ದೀಪ ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ ಮಹಿಳೆಗೆ ಬೂಕರ್ ಸಿಕ್ಕಿದ್ದು ಬಹಳ ಸಂತೋಷವಾಗಿದೆ. ಹೋರಾಟದ ಹಿನ್ನೆಲೆಯಿಂದ ಬಂದಿರುವ ಬಾನು ಮುಷ್ತಾಕ್ ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದಸರಾ ಉದ್ಘಾಟನೆ ಆಹ್ವಾನ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಈ ಬಾರಿ ಮೈಸೂರು ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದ್ದು, ಉದ್ಘಾಟನೆಗೆ ಮೈಸೂರು ಜಿಲ್ಲಾಡಳಿತವು, ಲೇಖಕಿ ಬಾನು ಮುಷ್ತಾಕ್ ಅವರಿಗೆ ಗೌರವದಿಂದ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.



































































































error: Content is protected !!
Scroll to Top