ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ಇ.ಡಿ ವಶಕ್ಕೆ!

ಚಿತ್ರದುರ್ಗಾ : ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದೆ. ಇದರ ಬೆನ್ನಲ್ಲೇ ಸಿಕ್ಕಿಂನಲ್ಲಿ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ವಶಕ್ಕೆ ಪಡೆದಿದ್ದಾರೆ. ಆನ್ ಲೈನ್ ಗೇಮಿಂಗ್ ಆ್ಯಪ್ ಕಂಪನಿಗಳಿಗೆ ಆಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ವೀರೇಂದ್ರ ಪಪ್ಪಿ ಮೇಲಿದ್ದು, ಈ ಸಂಬಂಧ ಗೋವಾದಲ್ಲಿ ಪಪ್ಪಿ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡು ದಾಳಿ ನಡೆಸಿ ದಾಖಲೆ ಪತ್ರಗಳ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವೀರೇಂದ್ರ ಅವರು ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಮುಂತಾದ ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.



































































































error: Content is protected !!
Scroll to Top