ಕಾರ್ಕಳ : ಪರಿಶಿಷ್ಟ ಪಂಗಡದವರಿಗೆ ಒಳ ಮೀಸಲಾತಿಯನ್ನು ಕಾಲ ಮಿತಿಯಲ್ಲಿ ಜಾರಿಗೊಳಿಸಬೇಕು ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ಈದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಂದೀಪ್ ಡಿ. ಇವರನ್ನು ವರ್ಗಾವಣೆ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆದು ಸದರಿ ಇಲಾಖೆಯಲ್ಲಿ ಮುಂದುವರಿಸಬೇಕು. ಇಲಾಖೆಯ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಅವರು ಅತ್ಯುತ್ತಮ ಕೆಲಸ ಮಾಡಿದ್ದರು. ವರ್ಗಾವಣೆ ಮಾಡಿರುವುದು ಅವಕಾಶ ವಂಚಿತ ಆದಿವಾಸಿ ಸಮುದಾಯಕ್ಕೆ ತೀವ್ರ ಆಘಾತ ತಂದಿದೆ ಎಂದ ಗಂಗಾಧರ ಗೌಡ ಕಳೆದ ಬಜೆಟ್ ಅಧಿವೇಶನದಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳನ್ನು ಅತೀ ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.











