ಜ್ಞಾನಸುಧಾ : ಸಂಸ್ಥಾಪಕರ ಜನ್ಮ ದಿನಾಚರಣೆ – ಸಾಮಾಜಿಕ ನೆರವು

ಕಾರ್ಕಳ : ಸಾಮಾಜಿಕ ಪ್ರಜ್ಞೆಯ ಜವಾಬ್ದಾರಿಯನ್ನು ಹೊಂದಿದ ಅರ್ಥಪೂರ್ಣ ಆಡಂಬರ ರಹಿತ ಜ್ಞಾನಸುಧಾದ ಕಾರ್ಯಗಳು ಪ್ರಶಂಸನೀಯ. ಡಾ.ಸುಧಾಕರ್ ಶೆಟ್ಟಿಯವರು ಸಭ್ಯತೆ, ನಡೆನುಡಿಯ ಸಾಕಾರ ಮೂರ್ತಿ ಎಂದು ಕಾರ್ಕಳ ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯ ಪ್ರಸೂತಿ, ಸ್ತ್ರೀರೋಗ ತಜ್ಞ ಡಾ.ಸಂಜಯ್ ಹೇಳಿದರು.
ಅಜೆಕಾರ್ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್ನ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆ.21ರಂದು ನಡೆದ ಸಾಮಾಜಿಕ ನೆರವಿನ ಸೇವಾ ಕಾಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಮಾಜಿಕ ನೆರವು
ಅಜೆಕಾರ್ ಪದ್ಮಗೋಪಾಲ್‌ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಸಮಾಜ ಸೇವಕ ಅಂಬಲಪಾಡಿ ವಿಶು ಶೆಟ್ಟಿ ಹಾಗೂ ಸ್ವಚ್ಛ ಕಾರ್ಕಳದ ರಾಯಭಾರಿ ಫೆಲಿಕ್ಸ್‌ ಜೋಸೆಫ್ ವಾಜ್‌ ರವರಿಗೆ ತಲಾ 10 ಸಾವಿರ ರೂ., ಕುಕ್ಕುಂದೂರು, ಹಿರ್ಗಾನ,ಅಜೆಕಾರ್ ಹಾಗೂ ಬೈಲೂರು ಗ್ರಾಮದ 18 ಸ್ವಚ್ಛತಾ ಸಿಬ್ಬಂದಿಗೆ ತಲಾ 5 ಸಾವಿರ ರೂ. ನೀಡಿ ಗೌರವಿಸಲಾಯಿತು. ಕ್ಷಯ ಪೀಡಿತ 8 ಜನರಿಗೆ ತಲಾ 3 ಸಾವಿರದಂತೆ 24 ಸಾ. ರೂ., ಅಪಘಾತಕ್ಕೀಡಾದ ಹಳೆವಿದ್ಯಾರ್ಥಿ ಕಿರಣ್ ನಾಯಕ್‌ರವರಿಗೆ 20 ಸಾ. ರೂ., ತೊರೆಹಡ್ಲು ಶಾಲೆಗೆ 10 ಸಾ. ರೂ. ಸೇರಿದಂತೆ ಈ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 1.6 ಲಕ್ಷ ರೂ. ಧನಸಹಾಯ ಮಾಡಲಾಯಿತು.

ಗೌರವ ಸ್ವೀಕರಿಸಿ ಮಾತನಾಡಿದ ಸಮಾಜ ಸೇವಕ ವಿಶು ಶೆಟ್ಟಿಯವರು ಯುವಜನತೆ ದುಶ್ಚಟಗಳಿಗೆ ಒಳಗಾಗದೆ ಸದೃಢ ಸಮಾಜದ ಆಸ್ತಿಯಾಗಿ ಸಮಾಜದಲ್ಲಿ ಮಾದರಿಯಾಗಿ ಹೊರಹೊಮ್ಮಬೇಕು ಎಂದರು.

ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್‌ ಶೆಟ್ಟಿಯವರು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ವಿದ್ಯಾರ್ಥಿಗಳು ಮೌಲಿಕ ವಿಚಾರಧಾರೆಯನ್ನು ಮೈಗೂಡಿಸಿಕೊಂಡಾಗ ನಮ್ಮ ಸಾಮಾಜಿಕ ಸೇವೆಯು ಸಾರ್ಥಕ ಎಂದರು.

ಕಾರ್ಯಕ್ರಮದಲ್ಲಿ ಕುಕ್ಕುಂದೂರು ಗ್ರಾಮ ಪಂಚಾಯತ್ ಸದಸ್ಯ ರಹಮತ್ತುಲ್ಲಾ, ಅಜೆಕಾರ್ ಪದ್ಮಗೋಪಾಲ್‌ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಅನಿಲ್ ಕುಮಾರ್‌ ಜೈನ್, ಮಣಿಪಾಲ್ ಹೈಸ್ಕೂಲ್ ಟ್ರಸ್ಟಿನ ಅಧ್ಯಕ್ಷ ಹಾಗೂ ಸಂಚಾಲಕ ಪ್ರಕಾಶ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರ್, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂತೋಷ್, ಮಣಿಪಾಲ್‌ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ ಉಪಸ್ಥಿತರಿದ್ದರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ನಿರೂಪಿಸಿ ವಂದಿಸಿದರು.















































































error: Content is protected !!
Scroll to Top