ಮೂಡಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಮಂಗಳೂರಿನ ಶಾರದಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಮೂಡುಬಿದಿರೆಯ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಚೇತನಾ ಕುಮಾರಿ ಎಸ್. ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ಪಿಯುಸಿ ಆರ್. ಕೃಷ್ಣ ಬಾಲಕರ ವಿಭಾಗದಲ್ಲಿ ಐದನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಬಾಲಕರ ತಂಡದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಜ್ವಲ್ ಎ.ಬಿ., ಸೌಮಿತ್ ಸುಮಂತ್ ಶಾನಭಾಗ್, ಸಂಹಿತ್ ರಾವ್, ಅಥರ್ವ ಬೋದಾಸ್, ಭವಿಷ್ ಗೌಡ ಜಿ.ಎಸ್. ಹಾಗೂ ಬಾಲಕಿಯರ ತಂಡದಿಂದ ಪ್ರಥಮ ಪಿಯುಸಿ ವೈಷ್ಣವಿ, ಕೃಷ್ಣಾ ಜಿ. ಪೂಜಾರಿ, ವರ್ಷ ಆರ್., ದ್ವಿತೀಯ ಪಿಯುಸಿ ಅನುಷ್ಕಾ ಆರ್., ಚೈತನ್ಯ ಪಿ, ಅನರ್ಘ್ಯ ಎನ್., ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಗೆ ವೈಬ್ರೆಂಟ್ ಎಜುಕೇಷನ್ ಮತ್ತು ಚಾರಿಟೆಬಲ್ ಟ್ರಸ್ಟ್ ನ ಟ್ರಸ್ಟಿಗಳು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.





















