ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ. 28 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ತೀವ್ರ ಮಳೆ ಹಿನ್ನೆಲೆ ಇಂದು ಶಾಲೆ – ಪಿಯು ಕಾಲೇಜುಗಳಿಗೆ ರಜೆ





















