ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಂಬಾಡಿ ಪದವು ಇಲ್ಲಿ ದೈಹಿಕ ಶಿಕ್ಷಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ರವೀಂದ್ರನ್ ಪಿ. ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಆ. 29ರಂದು ನಡೆಯಿತು. ಎಸ್‌ಡಿಎಂಸಿ ಅಧ್ಯಕ್ಷೆ ಸಂಗೀತ ಬಿ.ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ವಿನಯ ಹೆಗ್ಡೆ, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಸುರೇಶ ಆಚಾರ್ಯ, ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ, ಶಿಕ್ಷಣ ಸಂಯೋಜಕ ಪ್ರಕಾಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಕುಲಾಲ್, ಎಸ್‌ಡಿಎಂಸಿ ಉಪಾಧ್ಯಕ್ಷ ಜಯಂತ ನಾಯಕ್, ಶಾಲಾ ಮುಖ್ಯ ಶಿಕ್ಷಕ ನಾಗರಾಜ್ ಬಿ. ಉಪಸ್ಥಿತರಿದ್ದರು. ಶಿಕ್ಷಕರಾದ ನಮಿತಾ ಸ್ವಾಗತಿಸಿದರು. ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿ. ರಶ್ಮಿ ವಂದಿಸಿದರು.
ಕಲ್ಲಂಬಾಡಿ ಪದವು ಶಾಲಾ ದೈಹಿಕ ಶಿಕ್ಷಕರಿಗೆ ಬೀಳ್ಕೊಡುಗೆ
































































