ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳ ಎಸ್.ವಿ.ಟಿ. ವನಿತಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅನ್ವಿತಾ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದೇ ಪಂದ್ಯಾಟದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಪ್ರೇಕ್ಷಾ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ಮೇಘನ ದ್ವಿತೀಯ ಸ್ಥಾನವನ್ನು ಪಡೆದರೆ, ಪ್ರಥಮ ವಾಣಿಜ್ಯ ವಿಭಾಗದ ಜ್ಯೋತಿ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ಅಂಕಿತ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಹಿರಿಯ ಸಹ ಶಿಕ್ಷಕರು, ಪ್ರಾಧ್ಯಾಪಕ-ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.
ಕುಸ್ತಿ : ಎಸ್.ವಿ.ಟಿ.ಯ ಅನ್ವಿತಾ ರಾಜ್ಯ ಮಟ್ಟಕ್ಕೆ




















