ಇಸ್ಲಾಮಾಬಾದ್ : ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ನಡೆದಿದೆ.
ಸೆ. 1ರಂದು ಗಿಲ್ಗಿಟ್-ಬಾಲ್ಟಿಸ್ತಾನ್‌ನ ಡೈಮರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ ಬಳಿ ಈ ಅವಘಡ ಸಂಭವಿಸಿದೆ. ಪರಿಣಾಮ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಸಾವನ್ನಪ್ಪಿದ್ದಾರೆ.
ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್‌ನಲ್ಲಿ ಲ್ಯಾಂಡಿಂಗ್ ಪರೀಕ್ಷೆ ನಡೆಸುತ್ತಿದ್ದಾಗ Mi-17 ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಐದು ಜನರೂ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.










