ಹಿರಿಯಂಗಡಿ ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆಯಲ್ಲಿ ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ

ಕಾರ್ಕಳ : ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆಯಲ್ಲಿ 39 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿದ ಪ್ರಭಾಕರ್ ಜೈನ್ ಮತ್ತು ಹಿಂದಿ ಶಿಕ್ಷಕರಾಗಿ 34 ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ ಯೋಗರಾಜ್ ಬಸ್ತಿ ಅವರ ಬೀಳ್ಕೊಡುಗೆ ಸಮಾರಂಭ ಆ. 30ರಂದು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಸಂಸ್ಥೆಯ ಸಂಚಾಲಕ ಎಂ.ಕೆ. ವಿಜಯಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ, ಆಡಳಿತ ಮಂಡಳಿಯ ಸದಸ್ಯರಾದ ಅನಂತ ರಾಜ್ ಪೂವಣಿ, ಅಂಡಾರು ಮಹಾವೀರ ಹೆಗ್ಡೆ, ಅಶೋಕ್ ಬಲ್ಲಾಳ್, ಸಂಪತ್ ಸಾಮ್ರಾಜ್ಯ, ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಉಷಾ ಪಡಿವಾಳ್ ಸ್ವಾಗತಿಸಿಸಿದರು. ಶಿಕ್ಷಕಿಯರಾದ ದಿವ್ಯಜ್ಯೋತಿ ಕಾರ್ಯಕ್ರಮ ನಿರೂಪಿಸಿ, ಅಮೃತಾ ವಂದಿಸಿದರು.







































error: Content is protected !!
Scroll to Top